ಪ್ರತಿಭಾ ಕಾರಂಜಿ ಭರತನಾಟ್ಯ ಸ್ಪರ್ಧೆ-ಕು.ಕೀರ್ತನಾ ವರ್ಮ ಜಿಲ್ಲಾ ಮಟ್ಟಕ್ಕೆ ಆಯ್ಕೆ

0

ಪುತ್ತೂರು: ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿ ವತಿಯಿಂದ ಆಯೋಜಿಸಲಾದ ಪ್ರತಿಭಾ ಕಾರಂಜಿ ಭರತನಾಟ್ಯ ಸ್ಪರ್ಧೆಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿನಿ ಕು.ಕೀರ್ತನಾ ವರ್ಮ ಅವರು ಪುತ್ತೂರು ತಾಲೂಕು ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು, ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಕು.ಕೀರ್ತನಾ ವರ್ಮ ಪುತ್ತೂರು ನಾಟ್ಯರಂಗದ ಖ್ಯಾತ ನೃತ್ಯಗುರು ವಿದುಷಿ ಮಂಜುಳ ಸುಬ್ರಹ್ಮಣ್ಯ ಅವರ ಶಿಷ್ಯೆಯಾಗಿದ್ದು, ಪುತ್ತೂರು ಪ್ರತಾಪ ಸಿಂಹ ವರ್ಮ ಹಾಗೂ ವೀಣಾಕುಮಾರಿ ದಂಪತಿಯ ಸುಪುತ್ರಿಯಾಗಿರುತ್ತಾರೆ.

ವಿದ್ಯಾರ್ಥಿನಿಯ ಈ ಸಾಧನೆಗೆ ಶಾಲಾ ಆಡಳಿತ ಮಂಡಳಿ, ಶಿಕ್ಷಕ ವೃಂದ, ನೃತ್ಯಗುರು ಹಾಗೂ ಪೋಷಕರು ಹರ್ಷ ವ್ಯಕ್ತಪಡಿಸಿ ಅಭಿನಂದನೆ ಸಲ್ಲಿಸಿದ್ದಾರೆ.

LEAVE A REPLY

Please enter your comment!
Please enter your name here