ಹಿರೇಬಂಡಾಡಿ ಶಾಲಾ ಹಿರಿಯ ವಿದ್ಯಾರ್ಥಿ ಸಂಘದ ಸಭೆ

0

ಹಿರೇಬಂಡಾಡಿ: ಸರಕಾರಿ ಉ.ಹಿ.ಪ್ರಾ.ಶಾಲೆ ಹಿರೇಬಂಡಾಡಿ ಇಲ್ಲಿನ ಹಿರಿಯ ವಿದ್ಯಾರ್ಥಿ ಸಂಘದ ಸಭೆ ಡಿ.16ರಂದು ಶಾಲೆಯ ಸಭಾಂಗಣದಲ್ಲಿ ನಡೆಯಿತು.


ಹಿರಿಯ ವಿದ್ಯಾರ್ಥಿ, ಮಾಜಿ ಶಾಸಕರಾದ ಸಂಜೀವ ಮಠಂದೂರು ಅವರು ಉದ್ಘಾಟಿಸಿ ಮಾತನಾಡಿ, ಶಾಲೆ ಪ್ರಾರಂಭಗೊಂಡು 71 ವರ್ಷ ಕಳೆದಿದೆ. ಈ ಸಂದರ್ಭದಲ್ಲಿ ಶಾಲೆಯಲ್ಲಿ ಕಲಿತ ಎಲ್ಲಾ ಹಿರಿಯ ವಿದ್ಯಾರ್ಥಿಗಳು ಒಟ್ಟಿಗೆ ಸೇರಿ ಶಾಲೆಯ ಅಭಿವೃದ್ಧಿಗೆ ಕೈ ಜೋಡಿಸುತ್ತಿರುವುದು ಒಳ್ಳೆಯ ಬೆಳವಣಿಗೆ. ಹಿರಿಯ ವಿದ್ಯಾರ್ಥಿಗಳು ತಮ್ಮ ಕಿಂಚಿತ್ ಸೇವೆಯನ್ನು ಈ ಶಾಲೆಗೆ ಮಾಡುವ ಮೂಲಕ ತಾವು ಕಲಿತ ಶಾಲೆಯನ್ನು ಮತ್ತೊಮ್ಮೆ ಮೆಲುಕು ಹಾಕುವ ಕೆಲಸ ಆಗಬೇಕೆಂದು ಹೇಳಿದರು.


ಎಸ್‌ಡಿಎಂಸಿ ಅಧ್ಯಕ್ಷ ಸೋಮೇಶ್ ಕೇಪುಳು, ಉಪಾಧ್ಯಕ್ಷೆ ಕವಿತಾ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ನವೀನ್ ಪಡ್ಪು, ಹಿರೇಬಂಡಾಡಿ ಗ್ರಾ.ಪಂ.ಸದಸ್ಯರಾದ ಸತೀಶ್ ಶೆಟ್ಟಿ ಹೆನ್ನಾಳ, ನಾರಾಯಣ ಸೆಟ್ಲಪಾಲ್, ಭವಾನಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶಾಲಾ ಪ್ರಭಾರ ಮುಖ್ಯಗುರು ಶಿವಪ್ಪ ರಾಥೋಡ್ ಸ್ವಾಗತಿಸಿ, ಹಿರಿಯ ಶಿಕ್ಷಕಿ ವಾರಿಜ ವಂದಿಸಿದರು. ಅತಿಥಿ ಶಿಕ್ಷಕಿ ರಾಧಿಕಾ ಕಾರ್ಯಕ್ರಮ ನಿರೂಪಿಸಿದರು. ಸಭೆಯಲ್ಲಿ ಸುಮಾರು 100 ಹಿರಿಯ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಜ.೪ರಂದು ಮತ್ತೆ ಸಭೆ ನಡೆಸಲು ನಿರ್ಧರಿಸಲಾಯಿತು.

LEAVE A REPLY

Please enter your comment!
Please enter your name here