ಪ್ರತಿಭಾ ಕಾರಂಜಿ ಸ್ಪರ್ಧೆ: ಸೈಂಟ್ ಆನ್ಸ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

0

ಕಡಬ: ಪುತ್ತೂರು ತಾಲೂಕಿನ ಹಾರಾಡಿಯಲ್ಲಿರುವ ಸರಕಾರಿ ಮಾದರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪುತ್ತೂರು ಹಾಗೂ ಕಡಬ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ–ಕಲೋತ್ಸವ 2025 ಕಾರ್ಯಕ್ರಮ ಇತ್ತೀಚೆಗೆ ನಡೆಯಿತು.

ಈ ಸ್ಪರ್ಧೆಯಲ್ಲಿ ಕಡಬದ ಸೈಂಟ್ ಆನ್ಸ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ವಿವಿಧ ವಿಭಾಗಗಳಲ್ಲಿ ಭಾಗವಹಿಸಿ ಗಮನಾರ್ಹ ಸಾಧನೆ ಮಾಡಿದ್ದಾರೆ. ಶಾಲೆಯ ವಿದ್ಯಾರ್ಥಿಗಳಾದ ಮೊಹಮ್ಮದ್ ರಾಝೀಕ್, ಶೌರ್ಯ, ಇಹ ಎನ್, ನಯೋನಿಕ ಬಿ.ಸಿ, ಮುಫಿದ ಅಸ್ನ ಹಾಗೂ ಅನ್ವಿತಾ ಶೆಟ್ಟಿ ವಿವಿಧ ಸ್ಪರ್ಧೆಗಳಲ್ಲಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದರು.

ಕಿರಿಯರ ವಿಭಾಗದ ಚಿತ್ರಕಲೆ ಸ್ಪರ್ಧೆಯಲ್ಲಿ ನಯೋನಿಕ ಬಿ.ಸಿ ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ. ಅಲ್ಲದೆ, ಹಿರಿಯರ ವಿಭಾಗದ ಇಂಗ್ಲೀಷ್ ಕಂಠಪಾಠ ಸ್ಪರ್ಧೆಯಲ್ಲಿ ಮುಫಿದ ಅಸ್ನ ಹಾಗೂ ಚಿತ್ರಕಲೆ ವಿಭಾಗದಲ್ಲಿ ಅನ್ವಿತಾ ಶೆಟ್ಟಿ ಪ್ರಥಮ ಸ್ಥಾನ ಗಳಿಸಿ ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

ವಿದ್ಯಾರ್ಥಿಗಳ ಈ ಸಾಧನೆಗೆ ಶಾಲೆಯ ಸಂಚಾಲಕರು, ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಶಿಕ್ಷಕ ವೃಂದ ಅಭಿನಂದನೆ ಸಲ್ಲಿಸಿದ್ದಾರೆ.

LEAVE A REPLY

Please enter your comment!
Please enter your name here