







ಪುತ್ತೂರು: 9 ತಿಂಗಳ ಹಿಂದೆ ಈಶ್ವರಮಂಗಲದ ರೆಸ್ಟೋರೆಂಟ್ವೊಂದರಲ್ಲಿ ನಡೆದ ಕಳವು ಪ್ರಕರಣದ ಆರೋಪಿಗೆ ಪುತ್ತೂರು ಎ.ಎಸ್.ಸಿ.ಜೆ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.


ಐವರ್ನಾಡು ನಿವಾಸಿ ಶಿವಪ್ರಸಾದ್ ಜೈಲುಶಿಕ್ಷೆಗೆ ಗುರಿಯಾದ ಆರೋಪಿ. ಈತ ನೆಟ್ಟಣಿಗೆಮುಡ್ನೂರು ಗ್ರಾಮದ ಈಶ್ವರಮಂಗಲದಲ್ಲಿರುವ ಶನ್ಯ ರೆಸ್ಟೋರೆಂಟ್ನಲ್ಲಿ ಅಡುಗೆ ಕೆಲಸ ಮಾಡುತ್ತಿದ್ದು ಎ.21 ರಿಂದ ಎ.24ರ ಮಧ್ಯೆ ರೆಸ್ಟೋರೆಂಟ್ನ ಕಿಚನ್ ವಿಭಾಗದ ಬಾಗಿಲು ಮುರಿದು ಡ್ರಾವರ್ನಲ್ಲಿ ಇದ್ದ ರೂ. 90ಸಾವಿರ ನಗದು ಕಳವು ಮಾಡಿದ್ದ. ಕಳವು ಮಾಡುತ್ತಿರುವ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿತ್ತು. ಇದರ ಆಧಾರದಲ್ಲಿ ಕಳವು ಪ್ರಕರಣ ಪತ್ತೆ ಹಚ್ಚಿದ್ದರು. ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸ್ ಉಪನಿರೀಕ್ಷಕರಾದ ಸುಷ್ಮ ಭಂಡಾರಿರವರು ಈ ಪ್ರಕರಣದ ವಿಚಾರಣೆ ನಡೆಸಿ, ಅಗತ್ಯ ಸಾಕ್ಷಿಗಳನ್ನು ಕಲೆಹಾಕಿ ತ್ವರಿತವಾಗಿ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸಿದ್ದು, ನ್ಯಾಯಾಲಯದಲ್ಲಿ ಸರ್ಕಾರದ ಪರವಾಗಿ ಚೇತನಾದೇವಿರವರು ಸಮರ್ಥವಾಗಿ ವಾದ ಮಂಡನೆ ನಡೆಸಿದ್ದರು.



ವಾದ ಆಲಿಸಿದ ಎ.ಎಸ್.ಸಿ.ಜೆ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯ ಪುತ್ತೂರು ಇಲ್ಲಿನ ನ್ಯಾಯಾಧಿಶ ದೇವರಾಜ್ರವರು ಆರೋಪಿಗೆ 3 ವರ್ಷಗಳ ಸಾದಾ ಸಜೆ ಹಾಗೂ 1೦,೦೦೦ ರೂ.ದಂಡ ವಿಧಿಸಿ, ದಂಡ ಪಾವತಿಸಲು ತಪ್ಪಿದಲ್ಲಿ ಆರು ತಿಂಗಳ ಸದಾ ಕಾರವಾಸ ಶಿಕ್ಷೆ, ವಿಧಿಸಿ ಆದೇಶಿಸಿದ್ದಾರೆ.










