






ಪುತ್ತೂರು: ಪುತ್ತೂರು ಶಾಸಕ ಅಶೋಕ್ ರೈ ಅವರ ವಿವಾಹ ವಾರ್ಷಿಕೋತ್ಸವ ದಿನದ ಪ್ರಯುಕ್ತ ಕೋಡಿಂಬಾಡಿ ಶ್ರೀಮಹಿಷಮರ್ಧಿನಿ ಹಾಗೂ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.


ಶಾಸಕ ಅಶೋಕ್ ರೈ ಹಾಗೂ ಧರ್ಮ ಪತ್ನಿ ಸುಮಾ ಅಶೋಕ್ ರೈ ಅವರು ವಿಶೇಷ ಪ್ರಾರ್ಥನೆ ಸಲ್ಲಿಸಿದರು.




ಕೋಡಿಂಬಾಡಿ ಮಹಿಷಮರ್ದಿನಿ ದೇವಸ್ಥಾನದಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ನಿರಂಜನ್ ರೈ ಮಠಂತಬೆಟ್ಟು ಶಾಲು ಹೊದಿಸಿ ದಂಪತಿಗಳನ್ನು ಸನ್ಮಾನಿಸಿ, ಗೌರವಿಸಿದರು. ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪಂಜಿಗುಡ್ಡೆ ಈಶ್ವರಭಟ್ ,ಸಮಿತಿ ಸದಸ್ಯರಾದ ವಿನಯಕುಮಾರ್ ಸಹಿತ ಹಲವು ಮಂದಿ ಉಪಸ್ಥಿತರಿದ್ದರು.










