ರಾಮಕುಂಜ ಅಂಗನವಾಡಿ ಕೇಂದ್ರದಲ್ಲಿ ಬಾಲಮೇಳ

0

ರಾಮಕುಂಜ: ರಾಮಕುಂಜ ಅಂಗನವಾಡಿ ಕೇಂದ್ರದಲ್ಲಿ ಬಾಲವಿಕಾಸ ಸಮಿತಿ ಅಧ್ಯಕ್ಷೆ ಚೇತನಾರವರ ಅಧ್ಯಕ್ಷತೆಯಲ್ಲಿ ಬಾಲಮೇಳ ನಡೆಯಿತು.


ರಾಮಕುಂಜ ಗ್ರಾ.ಪಂ.ಅಧ್ಯಕ್ಷೆ ಸುಚೇತಾ ಉದ್ಘಾಟಿಸಿದರು. ಕೊಯಿಲ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಮಂಜುನಾಥ್‌ರವರು ಮಕ್ಕಳ ಆರೋಗ್ಯ ತಪಾಸಣೆ ನಡೆಸಿದರು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮೇಲ್ವಿಚಾರಕಿ ನಂದನರವರು ಮಕ್ಕಳ ಬೆಳವಣಿಗೆ ಬಗ್ಗೆ ಮಾತನಾಡಿದರು. ರಾಮಕುಂಜ ಗ್ರಾ.ಪಂ.ಉಪಾಧ್ಯಕ್ಷ ಕೇಶವ ಗಾಂಧಿಪೇಟೆ, ಸದಸ್ಯರಾದ ಅಬ್ದುಲ್ ರಹಿಮಾನ್, ಆಯಿಷತ್‌ಶರೀಫ್, ಆಶಾ ಕಾರ್ಯಕರ್ತೆ ಪ್ರಮೀಳಾ, ಸಿಹೆಚ್‌ಒ ಸಂಧ್ಯಾ ಹಾಗೂ ಮಕ್ಕಳ ಪೋಷಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.


ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿದ್ದ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು. ಅಂಗನವಾಡಿ ಕಾರ್ಯಕರ್ತೆ ಯಮುನಾ ಸ್ವಾಗತಿಸಿ, ವಂದಿಸಿದರು. ಸಹಾಯಕಿ ಪ್ರವೀಣ ಕೆ.ವಿ.ಸಹಕರಿಸಿದರು. ಅಂಗನವಾಡಿ ಪುಟಾಣಿಗಳು ಪ್ರಾರ್ಥಿಸಿದರು. ನಂತರ ಅಂಗನವಾಡಿ ಮಕ್ಕಳಿಂದ ವಿವಿಧ ನೃತ್ಯ ಕಾರ್ಯಕ್ರಮ ನಡೆಯಿತು.

LEAVE A REPLY

Please enter your comment!
Please enter your name here