






ಪುತ್ತೂರು: ಕೆ ಸ್ವಿಮ್ಮಿಂಗ್ ಸೆಂಟರ್ ಹಾಗೂ ಮಿಲೇನಿಯಂ ವರ್ಲ್ಡ್ ಸ್ಕೂಲ್ ಸಹಯೋಗದಲ್ಲಿ ಡಿ.28 ರಂದು ನಡೆದ ಎಲ್ಲಾ ವಯೋಮಿತಿಯ ನಾನ್ ಮೆಡಲಿಸ್ಟ್ ಈಜು ಸ್ಪರ್ಧೆಯಲ್ಲಿ ಪುತ್ತೂರಿನ ಅಕ್ವೆಟಿಕ್ ಕ್ಲಬ್ 1 ಚಿನ್ನ, 7 ಬೆಳ್ಳಿ ಹಾಗೂ 3 ಕಂಚಿನ ಪದಕಗಳನ್ನು ಗೆದ್ದುಕೊಂಡಿದೆ.


ಅಕ್ವೆಟಿಕ್‌ನ ಈಜುಪಟು ಇಶಾನಿ ಆರ್ ರೈ 50 ಮೀಟರ್ ಬ್ರೆಸ್ಟ್‌ಸ್ಟ್ರೋಕ್ ಸ್ಪರ್ಧೆಯಲ್ಲಿ ಚಿನ್ನ, 50 ಮೀಟರ್ ಬ್ಯಾಕ್‌ಸ್ಟ್ರೋಕ್ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದುಕೊಂಡಿದ್ದಾರೆ. 50 ಮೀಟರ್ ಬ್ಯಾಕ್‌ಸ್ಟ್ರೋಕ್ ಸ್ಪರ್ಧೆಯಲ್ಲಿ ಕೌಸ್ತುಭ್ ರೈ ಕಂಚಿನ ಪದಕ ಗೆದ್ದುಕೊಂಡಿದ್ದಾರೆ.



ದೀಪಾಂಶ್ ಶೆಟ್ಟಿ 100 ಮೀಟರ್ ಇಂಡಿವಿಜುವಲ್ ಮೆಡ್ಲಿ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದಿದ್ದು, 50 ಮೀಟರ್ ಫ್ರೀಸ್ಟೈಲ್ ಹಾಗೂ 50 ಮೀಟರ್ ಬ್ಯಾಕ್‌ಸ್ಟ್ರೋಕ್ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಮಾನ್‌ವಿ ಅವರು 50 ಮೀಟರ್ ಫ್ರೀಸ್ಟೈಲ್ ಸ್ಪರ್ಧೆಯಲ್ಲಿ ಕಂಚು ಹಾಗೂ 50 ಮೀಟರ್ ಬ್ರೆಸ್ಟ್‌ಸ್ಟ್ರೋಕ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ, ಆದಿತ್ಯ ಸಿದ್ಧಾರ್ಥ ಬೌಧ್ ಅವರು 100 ಮೀಟರ್ ಇಂಡಿವಿಜುವಲ್ ಮೆಡ್ಲಿ ಸ್ಪರ್ಧೆಯಲ್ಲಿ ಕಂಚು ಮತ್ತು 50 ಮೀಟರ್ ಬಟರ್‌ಫ್ಲೈ ಸ್ಪರ್ಧೆಯಲ್ಲಿ ಬೆಳ್ಳಿ ಪದಕಗಳನ್ನು ಗೆದ್ದಿದ್ದಾರೆ. ಪೂರ್ವಿಕಾ ಎಸ್.ಎಚ್. ಅವರು 25 ಮೀಟರ್ ಬ್ರೆಸ್ಟ್‌ಸ್ಟ್ರೋಕ್ ಸ್ಪರ್ಧೆ ಹಾಗೂ 25 ಮೀಟರ್ ಫ್ರೀಸ್ಟೈಲ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕಗಳನ್ನು ಗೆದ್ದಿದ್ದಾರೆ. ಒಟ್ಟಾರೆಯಾಗಿ ಅಕ್ವೆಟಿಕ್ ಕ್ಲಬ್ 11 ಪದಕಗಳನ್ನು ಗೆದ್ದುಕೊಂಡಿದೆ.
ಈ ಎಲ್ಲಾ ಈಜುಗಾರರು ಪುತ್ತೂರಿನ ಡಾ. ಶಿವರಾಮ ಕಾರಂತ ಈಜುಕೊಳದಲ್ಲಿ ತರಬೇತಿ ಪಡೆಯುತ್ತಿದ್ದಾರೆ. ಇವರಿಗೆ ಪಾರ್ಥ ವಾರಣಾಶಿ, ಕ್ರತಿ ತೇಜ, ತ್ರಿಶೂಲ್ ಗೌಡ, ವಿಕಾಸ್ ಹಾಗೂ ಶಿಶಿಲ್ ಗೌಡ ಅವರು ತರಬೇತಿ ನೀಡುತ್ತಿದ್ದಾರೆ. ಸ್ಪರ್ಧಾ ವಿಜೇತರಿಗೆ ಅಭಿನಂದನೆ ಸಲ್ಲಿಸಿದ ಕ್ಲಬ್, ಮುಂದಿನ ಸ್ಪರ್ಧೆಗಳಲ್ಲಿ ಇನ್ನಷ್ಟು ಯಶಸ್ಸು ದೊರೆಯಲಿ ಎಂದು ಶುಭಹಾರೈಸಿದೆ.










