ಮರೀಲು ಸ್ನೇಹನಗರ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜಾ ಸಮಿತಿಯಿಂದ 24ನೇ ಸಾರ್ವಜನಿಕ ಸತ್ಯನಾರಾಯಣ ಪೂಜೆ 

0

ಪುತ್ತೂರು: ಮರೀಲು ಸ್ನೇಹನಗರ ಇಲ್ಲಿನ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ಆಶ್ರಯದಲ್ಲಿ 24ನೇ ವರ್ಷದ ಸಾರ್ವಜನಿಕ ಸತ್ಯನಾರಾಯಣ ಪೂಜೆಯು ಅರ್ಚಕರಾದ ಕೃಷ್ಣ ಭಟ್ ರವರ ನೇತೃತ್ವದಲ್ಲಿ ಡಿ.31 ರಂದು ಸಂಜೆ ಮರೀಲು ಸ್ನೇಹನಗರದ ಸಾರ್ವಜನಿಕ ಶ್ರೀ ಮಹಾಲಿಂಗೇಶ್ವರ ಕಟ್ಟೆಯಲ್ಲಿ ಜರಗಿತು.

ಸ್ನೇಹನಗರದ ಸಾರ್ವಜನಿಕ ಶ್ರೀ ಮಹಾಲಿಂಗೇಶ್ವರ ಕಟ್ಟೆಯ ಗೌರವ ಸಲಹೆಗಾರರಾದ ಭಾಸ್ಕರ ಎಂ.ರವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬಳಿಕ ಕೆಮ್ಮಿಂಜೆ ಶ್ರೀರಾಮ ಮಹಿಳಾ ಭಜನಾ ಮಂಡಳಿಯಿಂದ ಭಜನೆ, ಬಳಿಕ ಮಹಾಪೂಜೆ, ಅನ್ನಸಂತರ್ಪಣೆ, ಸಾತ್ವಿಕ್ ಪ್ರಭುರವರಿಂದ ಕೊಳಲು ವಾದನ ನಡೆಯಿತು. ಬಳಿಕ ಉದ್ಯಮಿ ಅಜಿತ್ ರೈ ಹೊಸಮನೆ, ಪದ್ಮ ಸೋಲಾರ್ ಸಿಸ್ಟಂನ ಸೀತಾರಾಮ ರೈ ಕೆದಂಬಾಡಿಗುತ್ತು, ಕೆಮ್ಮಿಂಜೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ಮಹಾವಿಷ್ಣು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಪೂಜಾರಿ ಬೆದ್ರಾಳರವರಿಗೆ ಹೂಗುಚ್ಛ ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಫ್ರೆಂಡ್ಸ್ ಸ್ನೇಹನಗರ ತಂಡದಿಂದ ಸುಡುಮದ್ದು ಪ್ರದರ್ಶನ ನೆರವೇರಲ್ಪಟ್ಡಿತು.

ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜಾ ಸಮಿತಿಯ ಅಧ್ಯಕ್ಷ ಅರುಣ್ ಕ್ಯಾಂಪ್ಕೋ, ಗೌರವಾಧ್ಯಕ್ಷ ರಾಜೇಂದ್ರ ಕೆ.ಮೆಸ್ಕಾಂ, ಕಾರ್ಯದರ್ಶಿ ಶಿವಕುಮಾರ್ ಹೆಗ್ಡೆ, ಕೋಶಾಧಿಕಾರಿ ಮೋಹನ್ ನಾೖಕ್‌ ಹಾಗೂ ಸಮಿತಿ ಸದಸ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here