






ನೆಲ್ಯಾಡಿ: ಪಂಚ ಗ್ಯಾರಂಟಿ ಯೋಜನೆ ಕಡಬ ತಾಲೂಕು ಅನುಷ್ಠಾನ ಸಮಿತಿ ಮನವಿಗೆ ಸ್ಪಂದಿಸಿ ನೆಲ್ಯಾಡಿ ಕೆಎಸ್‌ಆರ್‌ಟಿಸಿ ಬಸ್‌ನಿಲ್ದಾಣಕ್ಕೆ ಸಂಚಾರ ನಿಯಂತ್ರಕರ ನೇಮಕವಾಗಿದೆ ಎಂದು ಕಡಬ ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಸದಸ್ಯರಾದ ಉಷಾ ಅಂಚನ್ ನೆಲ್ಯಾಡಿ ಹಾಗೂ ಗಂಗಾಧರ ಶೆಟ್ಟಿ ಹೊಸಮನೆ ತಿಳಿಸಿದ್ದಾರೆ.


ನೆಲ್ಯಾಡಿ ಬಸ್‌ನಿಲ್ದಾಣದ ದುರವಸ್ಥೆಯ ಬಗ್ಗೆ ಸಚಿವರ ಗಮನಕ್ಕೆ ತರಲಾಗಿತ್ತು. ಅಲ್ಲದೆ ಪಂಚ ಗ್ಯಾರಂಟಿ ಯೋಜನೆ ತಾಲೂಕು ಸಮಿತಿ ಸಾಮಾನ್ಯ ಸಭೆಯಲ್ಲೂ ಈ ವಿಚಾರ ಪ್ರಸ್ತಾಪಿಸಿ ನೆಲ್ಯಾಡಿ ಬಸ್‌ನಿಲ್ದಾಣಕ್ಕೆ ಸಂಬಂಧಿಸಿದ ಜಾಗದ ಅಳತೆ ಮಾಡಿ ವರದಿ ಕೊಡಬೇಕು ಮತ್ತು ಸಾರ್ವಜನಿಕರ ಅನುಕೂಲಕ್ಕೆ ಸಂಚಾರ ನಿಯಂತ್ರಕರ ನೇಮಕಗೊಳಿಸಿ, ಎಲ್ಲಾ ಕೆಎಸ್‌ಆರ್‌ಟಿಸಿ ಬಸ್ಸುಗಳು ಬಸ್ಸು ನಿಲ್ದಾಣಕ್ಕೆ ಬಂದೇ ಹೋಗುವಂತೆ ವ್ಯವಸ್ಥೆ ಮಾಡಬೇಕೆಂದು ಕೆಎಸ್‌ಆರ್‌ಟಿಸಿ ಅಧಿಕಾರಿಗಳಿಗೆ ಸೂಚನೆ ನೀಡಲಾಗಿತ್ತು. ಇದಕ್ಕೆ ಸ್ಪಂದಿಸಿ ರಸ್ತೆ ಸಾರಿಗೆ ನಿಗಮದ ಅಧಿಕಾರಿಗಳು ಸಂಚಾರ ನಿಯಂತ್ರಕರ ನೇಮಕಗೊಳಿಸಿದ್ದಾರೆ. ಇದರ ಹಿಂದೆ ಕಡಬ ತಾಲೂಕು ಪಂಚ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಸುಧೀರ್ ಕುಮಾರ್ ಶೆಟ್ಟಿ, ಕಾರ್ಯನಿರ್ವಹಣಾಧಿಕಾರಿ ನವೀನ್ ಭಂಡಾರಿ ಹಾಗೂ ಎಲ್ಲಾ ಸದಸ್ಯರ ಅವಿರತ ಶ್ರಮ ಇದೆ ಎಂದು ಅವರು ತಿಳಿಸಿದ್ದಾರೆ.













