






ಪುತ್ತೂರು: ಬೆಂಗಳೂರಿನಲ್ಲಿ ಬಡವರ ಮನೆಗಳನ್ನು ಧ್ವಂಸಗೊಳಿಸಿ ಬುಲ್ಡೋಜರ್ ರಾಜಕೀಯ ನಡೆಸುತ್ತಿರುವುದಾಗಿ ಆರೋಪಿಸಿ ಎಸ್‌ಡಿಪಿಐ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿಯಿಂದ ಕಾಂಗ್ರೆಸ್ ಸರ್ಕಾರದ ವಿರುದ್ದ ದರ್ಬೆ ವೃತ್ತದ ಬಳಿ ಪ್ರತಿಭಟನೆ ನಡೆಸಲಾಯಿತು.


ಕಾಂಗ್ರೆಸ್‌ನಿಂದ ಮುಸ್ಲಿಮರಿಗೆ ವಂಚನೆ – ಎಂ.ಎ ರಫೀಕ್
ಎಸ್‌ಡಿಪಿಐ ಬೆಳ್ಳಾರೆ ಬ್ಲಾಕ್ ಅಧ್ಯಕ್ಷ ಎಂ.ಎ ರಫೀಕ್ ಅವರು ಮಾತನಾಡಿ “ಪಂಚ ಗ್ಯಾರೆಂಟಿಗಳನ್ನು ತೋರಿಸಿ ಕಾಂಗ್ರೆಸ್ ಪಕ್ಷವು ಮುಸ್ಲಿಂ ಸಮುದಾಯವನ್ನು ನಿರಂತರವಾಗಿ ವಂಚಿಸುತ್ತಾ ಬಂದಿದೆ. ಅಧಿಕಾರಕ್ಕೆ ಬಂದ ಮೇಲೆ ಬಡವರ ಹೊಟ್ಟೆಯ ಮೇಲೆ ಹೊಡೆಯುವ ಕೆಲಸ ಮಾಡುತ್ತಿದೆ. ಬೆಂಗಳೂರಿನಲ್ಲಿ ಬಡವರ ಆಸರೆಯಾಗಿದ್ದ ಮನೆಗಳನ್ನು ಧರಾಶಾಯಿಗೊಳಿಸುವ ಮೂಲಕ ಸರ್ಕಾರವು ಸರ್ವಾಧಿಕಾರಿ ಧೋರಣೆ ಪ್ರದರ್ಶಿಸುತ್ತಿದೆ ಎಂದು ಆರೋಪಿಸಿದರು.



ಪ್ರತಿಭಟನೆಯಲ್ಲಿ ಎಸ್‌ಡಿಪಿಐ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷ ಅಶ್ರಫ್ ಬಾವು, ಉಪಾಧ್ಯಕ್ಷ ಸುಲೈಮಾನ್ ಬಿ.ಕೆ, ಕೋಶಾಧಿಕಾರಿ ಎಂ.ಎಚ್ ಸದ್ದಾಂ ಮುರ ಉಪಸ್ಥಿತರಿದ್ದರು. ಎಸ್‌ಡಿಪಿಐ ವಿಟ್ಲ ಬ್ಲಾಕ್ ಅಧ್ಯಕ್ಷ ಕಮರುದ್ದೀನ್ ಪುಣಚ, ಕಬಕ ಬ್ಲಾಕ್ ಅಧ್ಯಕ್ಷ ಸಿದ್ದೀಕ್ ಉರಿಮಜಲು, ಪುತ್ತೂರು ನಗರ ಸಮಿತಿ ಉಪಾಧ್ಯಕ್ಷ ಶಮೀರ್ ನಾಜೂಕು ಹಾಗೂ ಇತರ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಕ್ಷೇತ್ರ ಜೊತೆ ಕಾರ್ಯದರ್ಶಿ ರಹೀಂ ಪುತ್ತೂರು ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಅದ್ದು ಕೊಡಿಪ್ಪಾಡಿ ವಂದಿಸಿದರು.










