ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ನಿವೃತ್ತ ಕಚೇರಿ ವ್ಯವಸ್ಥಾಪಕ ಜಗದೀಶ್ ಪಿ  ನಿಧನ

0

ಪುತ್ತೂರು: ಪುತ್ತೂರು ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಿವೃತ ಕಚೇರಿ ವ್ಯವಸ್ಥಾಪಕ ಜಗದೀಶ್ ಪಿ (72ವ) ಅವರು ಜ.6 ರಂದು ರಾತ್ರಿ ನಿಧನರಾದರು.

ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಧೀರ್ಘ ಕಾಲ ಸೇವೆ ಸಲ್ಲಿಸಿದ ಜಗದೀಶ್ ಅವರು ಹಲವಾರು ಹುದ್ದೆ ಅಲಂಕರಿಸಿದ್ದರು. ನಿವೃತರಾದ ಬಳಿಕ ಅವರು ಸಾಮೆತ್ತಡ್ಕದಲ್ಲಿ ವಾಸ್ತವ್ಯ ಹೊಂದಿದ್ದರು. ಜಗದೀಶ್ ಅವರ ಆರೋಗ್ಯದಲ್ಲಿ ಎರುಪೇರಾಗಿ ಮಂಗಳೂರು ಆಸ್ಪತ್ರೆಯಲ್ಲಿ ದಾಖಲಿಸಿದ್ದರು. ಅಲ್ಲಿ ಚಿಕಿತ್ಸೆಗೆ ಸ್ಪಂಧಿಸದೆ ನಿಧನರಾದರು. ಮೃತರು ಪತ್ನಿ ಸುಧಾ ಮತ್ತು ಕುಟುಂಬಸ್ಥರನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here