







ಪುತ್ತೂರು: ಪಾಳ್ಯತ್ತಡ್ಕ ಶ್ರೀ ಗಜಾನನ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರ ಕರ್ನಾಟಕ ಸರಕಾರದಿಂದ ನೀಡಿದ ಸ್ಮಾರ್ಟ್ ಕ್ಲಾಸ್ ರೂಮ್ ನ ಉದ್ಘಾಟನಾ ಸಮಾರಂಭ ಜ.6ರಂದು ನಡೆಯಿತು.


ಕಾರ್ಯಕ್ರಮದಲ್ಲಿ ಅಧ್ಯಕ್ಷ ಸ್ಥಾನವನ್ನು ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ನನ್ಯ ಅಚ್ಚುತ ಮೂಡೆತ್ತಾಯ ವಹಿಸಿದರು.ನೆಟ್ಟಣಿಗೆ ಮುಡ್ನೂರು ಗ್ರಾಮ ಪಂಚಾಯತ್ ನ ಉಪಾಧ್ಯಕ್ಷ ರಾಮ ಮೇನಾಲ ಸ್ಮಾರ್ಟ್ ಕ್ಲಾಸ್ ರೂಮ್ ನ ಉದ್ಘಾಟನೆಯನ್ನು ನೆರವೇರಿಸಿದರು. ನೆಟ್ಟಣಿಗೆ ಮುಡ್ನೂರು ಗ್ರಾಮ ಪಂಚಾಯತ್ ನ ಮಾಜಿ ಉಪಾಧ್ಯಕ್ಷ ರಾಮ ಪಕಳ, ಶಾಲಾ ಆಡಳಿತ ಮಂಡಳಿಯ ಸಂಚಾಲಕ ಶಿವರಾಮ ಪಿ, ಗಜಾನನ ವಿದ್ಯಾಸಂಸ್ಥೆಗಳ ಪ್ರಾಂಶುಪಾಲ ಶ್ಯಾಮಣ್ಣ, ಆಡಳಿತ ಮಂಡಳಿಯ ನಿರ್ದೇಶಕ ಶಿವರಾಮ ಶರ್ಮ ಕೆ, ಗಜಾನನ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯರಾದ ಸೌಮ್ಯ ಉಪಸ್ಥಿತರಿದ್ದು ಕಾರ್ಯಮಕ್ಕೆ ಶುಭಕೋರಿದರು.ಗಜಾನನ ಕನ್ನಡ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯ ನರೇಂದ್ರ ಭಟ್ ಪ್ರಾಸ್ತಾವಿಕ ಮಾತುಗಳನ್ನಾಡಿದರು.



ರತ್ನಾವತಿ ಮಾತಾಜಿ ಸ್ಮಾರ್ಟ್ ಕ್ಲಾಸ್ ನ ಬಗ್ಗೆ ವಿವರಿಸಿದರು. ಕಾರ್ಯಕ್ರಮದಲ್ಲಿ ವಿಧ್ಯಾರ್ಥಿಗಳು ಹಾಗೂ ಶಾಲಾ ಶಿಕ್ಷಕ ವೃಂದದವರು ಭಾಗವಹಿಸಿದರು. ಪ್ರಿಯ ಎನ್ ಮಾತಾಜಿ ಸ್ವಾಗತಿಸಿ,ಪ್ರೇಮ ಬಿ ಮಾತಾಜಿ ವಂದಿಸಿದರು. ಕಾರ್ಯಕ್ರಮವನ್ನು ವಿದ್ಯಾಲಕ್ಷ್ಮಿ ಜಿ ಮಾತಾಜಿ ನಿರೂಪಿಸಿದರು.










