ಕುಟ್ರುಪಾಡಿ: ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಕೊಠಡಿ ನಿರ್ಮಾಣಕ್ಕೆ ಧರ್ಮಸ್ಥಳದಿಂದ ಸಹಾಯಧನ

0

ಪುತ್ತೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ) ಕಡಬ ತಾಲ್ಲೂಕು, ಕುಟ್ರುಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾರ್ಕಳದಲ್ಲಿರುವ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಕೊಠಡಿ ನಿರ್ಮಾಣಕ್ಕೆ ಪೂಜ್ಯ ಡಾ| ಡಿ. ವೀರೇಂದ್ರ ಹೆಗಡೆಯವರು ಮಂಜೂರು ಮಾಡಿದ ಸಹಾಯಧನದ ಮಂಜೂರಾತಿ ಪತ್ರವನ್ನು ಹಸ್ತಾಂತರಿಸಲಾಯಿತು.


ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ) ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾ ನಿರ್ದೇಶಕ ಬಾಬು ನಾಯ್ಕ್ ಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷ ಪ್ರಸನ್ನ ಹೆಬ್ಬಾರು ಹಾಗೂ ಮುಖ್ಯ ಶಿಕ್ಷಕಿ ಸೂಸಮ್ಮ ಮುತ್ತಾಯಿರವರಿಗೆ ಮಂಜೂರಾತಿ ಪತ್ರವನ್ನು ಅಧಿಕೃತವಾಗಿ ಹಸ್ತಾಂತರಿಸಿದರು.


ಈ ಸಂದರ್ಭದಲ್ಲಿ ಕಡಬ ತಾಲೂಕಿನ ಯೋಜನಾಧಿಕಾರಿ ಪ್ರಕಾಶ್ ಕುಮಾರ್, ಉಡುಪಿ ಪ್ರಾದೇಶಿಕ ಕಚೇರಿ ಯೋಜನಾಧಿಕಾರಿ ಜಯಂತ್ ನಾಯ್ಕ್, ಶಾಲಾ ಎಸ್.ಡಿ.ಎಂ.ಸಿ ಮಾಜಿ ಅಧ್ಯಕ್ಷ ಸುಧಾಕರ್ ಪಿ., ವಲಯ ಮೇಲ್ವಿಚಾರಕ ವಿಜೇಶ್ ಜೈನ್, ಎಸ್.ಡಿ.ಎಂ.ಸಿ ಸದಸ್ಯ ಚಿದಾನಂದ ಎ.ಎಸ್., ಶ್ರುತಿ, ಸಂತೋಷ್, ಅಂಗನವಾಡಿ ಶಿಕ್ಷಕಿ ಮೇರಿ ಎನ್.ಎ. ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here