






ಅಡ್ಕ ಪ್ರೀಮಿಯರ್ ಲೀಗ್ ಸೀಸನ್-09 ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಾಟ


ಪುತ್ತೂರು: ಶಾಂತಿ ಸೌಹಾರ್ದತೆಗಾಗಿ ಕ್ರೀಡೆ ಎಂಬ ಧ್ಯೇಯ ವಾಕ್ಯದೊಂದಿಗೆ ಎಂಸಿಎ ಅಡ್ಕ ಇದರ ವತಿಯಿಂದ ನಾಡಹಬ್ಬ, ಸನ್ಮಾನ ಕಾರ್ಯಕ್ರಮ ಹಾಗೂ ಮೋರ್ನಿಂಗ್ ಕ್ರಿಕೆಟರ‍್ಸ್ ಅಡ್ಕ ಅರ್ಪಿಸುವ ಅಡ್ಕ ಪ್ರೀಮಿಯರ್ ಲೀಗ್ ಸೀಸನ್ -09 ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಾಟ ಜ.10 ರಂದು ಎಂಸಿಎ ಗ್ರೌಂಡ್ ಅಡ್ಕದಲ್ಲಿ ಜರಗಲಿದೆ.



ಬೆಳಿಗ್ಗೆ 10.30 ಕ್ಕೆ ಉದ್ಘಾಟನಾ ಸಮಾರಂಭ ನಡೆಯಲಿದ್ದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎಸ್ ಮಹಮ್ಮದ್ ಉದ್ಘಾಟಿಸಲಿದ್ದು ಒಳಮೊಗ್ರು ಗ್ರಾಪಂ ಉಪಾಧ್ಯಕ್ಷ ಅಶ್ರಫ್ ಉಜಿರೋಡಿ ಸಭಾಧ್ಯಕ್ಷತೆ ವಹಿಸಲಿದ್ದಾರೆ. ಒಳಮೊಗ್ರು ಗ್ರಾಪಂ ಅಧ್ಯಕ್ಷೆ ತ್ರಿವೇಣಿ ಪಲ್ಲತ್ತಾರು ಸಹಿತ ಹಲವು ಗಣ್ಯರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ರಾತ್ರಿ 8 ಕ್ಕೆ ಸಮಾರೋಪ ಸಮಾರಂಭ ನಡೆಯಲಿದ್ದು ಒಳಮೊಗ್ರು ಗ್ರಾಪಂ ಮಾಜಿ ಉಪಾಧ್ಯಕ್ಷ ಯೂಸುಫ್ ಪಿ.ಟಿ.ಪಿ ಸಭಾಧ್ಯಕ್ಷತೆ ವಹಿಸಲಿದ್ದು ಶಾಸಕರಾದ ಅಶೋಕ್ ಕುಮಾರ್ ರೈ, ಪುತ್ತಿಲ ಪರಿವಾರ ಟ್ರಸ್ಟ್‌ನ ಅರುಣ್ ಕುಮಾರ್ ಪುತ್ತಿಲ ಸಹಿತ ಹಲವು ಗಣ್ಯರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಕ್ರೀಡಾ ಪ್ರೇಮಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಎಮ್‌ಸಿಎ ಅಡ್ಕ ಇದರ ಅಧ್ಯಕ್ಷರು ಮತ್ತು ಸರ್ವ ಸದಸ್ಯರುಗಳ ಪ್ರಕಟಣೆ ತಿಳಿಸಿದೆ.
ಸನ್ಮಾನ ಕಾರ್ಯಕ್ರಮ
ವಿವಿಧ ಕ್ಷೇತ್ರದ ಸಾಧಕರಿಗೆ ಈ ಸಂದರ್ಭದಲ್ಲಿ ಸನ್ಮಾನ ನಡೆಯಲಿದ್ದು ಉದ್ಯಮ ಕ್ಷೇತ್ರದ ಸಾಧನೆಗೆ ಕುಂಬ್ರ ಮಾತೃಶ್ರೀ ಅರ್ಥ್ ಮೂವರ‍್ಸ್ ಮಾಲಕ ಮೋಹನದಾಸ ರೈ ಕುಂಬ್ರ, ಸಾಮಾಜಿಕ ಕ್ಷೇತ್ರದಲ್ಲಿ ಮಹಿಳಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಚಂದ್ರಪ್ರಭಾ ಗೌಡ, ಪತ್ರಿಕೋದ್ಯಮ ಕ್ಷೇತ್ರದಲ್ಲಿ ಸಿಶೇ ಕಜೆಮಾರ್, ಅಂಚೆ ವಿಭಾಗದಲ್ಲಿ ಉಮೇಶ್ ಕುಮಾರ್ ಬರಮೇಲು, ಕ್ರೀಡಾ ಕ್ಷೇತ್ರದಲ್ಲಿ ರಾಷ್ಟ್ರಮಟ್ಟದ ಕಬಡ್ಡಿ ಪಟು ಸನ್ನಿಧಿ ನಾನಿಲ್ತಡ್ಕರವರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ.









