ಸಂಜೀವಿನಿ ಕ್ಯಾನ್ಸರ್ ಸೇವಾ ಟ್ರಸ್ಟ್, M.I.O ಆಶ್ರಯದಲ್ಲಿ ಸ್ಥಾಪಿಸಲಾದ ಕ್ಯಾನ್ಸರ್ ಮಾಹಿತಿ ಕೇಂದ್ರದ ಉದ್ಘಾಟನೆ

0

 “ಪುತ್ತೂರಿನ ಜನರಿಗೆ ಉಚಿತ ಚಿಕಿತ್ಸೆ ನೀಡಿ ನಂಬಿಕೆ ಗಳಿಸಿದ ಸೇವೆ” – ಶಾಸಕ ಅಶೋಕ್ ಕುಮಾರ್ ರೈ

ಪುತ್ತೂರು: ಪುತ್ತೂರಿನಲ್ಲಿ ಸಂಜೀವಿನಿ ಕ್ಯಾನ್ಸರ್ ಸೇವಾ ಟ್ರಸ್ಟ್ ಹಾಗೂ ಮಂಗಳೂರು ಇನ್‌ಸ್ಟಿಟ್ಯೂಟ್ ಆಫ್ ಆಂಕಾಲಜಿ (M.I.O) ಸಂಯುಕ್ತ ಆಶ್ರಯದಲ್ಲಿ ಸ್ಥಾಪಿಸಲಾದ ನೂತನ ಕ್ಯಾನ್ಸರ್ ಮಾಹಿತಿ ಕೇಂದ್ರ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಶಾಸಕ ಅಶೋಕ್ ಕುಮಾರ್ ರೈ ಅವರು ಉದ್ಘಾಟಿಸಿ, M.I.O ಹಾಗೂ ಟ್ರಸ್ಟ್‌ನ ನಿಸ್ವಾರ್ಥ ಸೇವೆಯ ಬಗ್ಗೆ ಸ್ಥಳೀಯರಿಂದ ಉತ್ತಮ ಅಭಿಪ್ರಾಯಗಳನ್ನು ಕೇಳಿರುವುದಾಗಿ ತಿಳಿಸಿ, ಕ್ಯಾನ್ಸರ್ ಕುರಿತು ವ್ಯಾಪಕ ಜಾಗೃತಿ ಅವಶ್ಯಕವೆಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮಂಗಳೂರು ಇನ್‌ಸ್ಟಿಟ್ಯೂಟ್ ಆಫ್ ಆಂಕಾಲಜಿಯ ನಿರ್ದೇಶಕ, ಸಂಜೀವಿನಿ ಕ್ಯಾನ್ಸರ್ ಸೇವಾ ಟ್ರಸ್ಟ್‌ನ ವ್ಯವಸ್ಥಾಪಕ ಟ್ರಸ್ಟಿ ಡಾ. ಡಿ. ಸುರೇಶ್ ರಾವ್ ಸಾರ್ವಜನಿಕರಲ್ಲಿ ಕ್ಯಾನ್ಸರ್ ಕುರಿತು ಜಾಗೃತಿ ಮೂಡಿಸುವ ಮೂಲಕ ತಡ ಹಂತದಲ್ಲಿ ಆಸ್ಪತ್ರೆಗೆ ಬರುವ ಪ್ರಕರಣಗಳನ್ನು ಕಡಿಮೆ ಮಾಡುವುದೇ M.I.Oಯ ಪ್ರಮುಖ ಗುರಿಯಾಗಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಪುತ್ತೂರು ತಾಲೂಕಿನ ಅಧ್ಯಕ್ಷ ಉಮೇಶ್ ನಾಯಕ್, ಡಾ. ಸುರೇಶ್ ಪುತ್ತೂರಾಯ, ಡಾ. ಜೆ.ಸಿ. ಅಡಿಗ, ಪುತ್ತೂರು ಸರ್ಕಾರಿ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ಯದುರಾಜ್, ಹಾಗೂ ಕಾಂಗ್ರೆಸ್ ನಾಯಕ ಮತ್ತು ಬಂಟರ ಸಂಘ, ಪುತ್ತೂರು ತಾಲೂಕಿನ ಅಧ್ಯಕ್ಷ ಹೇಮನಾಥ ಶೆಟ್ಟಿ ಕಾವು ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ಆರೋಗ್ಯ ಕ್ಷೇತ್ರದ ತಜ್ಞರು ಮತ್ತು ಸ್ಥಳೀಯ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿ, ಮಾಹಿತಿ ಕೇಂದ್ರದ ಮಹತ್ವವನ್ನು ವಿವರಿಸಿದರು. ಮಾಹಿತಿ ಕೇಂದ್ರದ ಸಿಬ್ಬಂದಿ ಹೇಮಂತ್ ಕುಮಾರ್ ಸ್ವಾಗಿತಿಸಿ, ವಂದಿಸಿದರು. M.I.O ಸಿಬ್ಬಂದಿ ಹಾಗೂ ಪುತ್ತೂರು ಮಾಹಿತಿ ಕೇಂದ್ರದ ಮೇಲ್ವಿಚಾರಕಿ ದಿವ್ಯಶ್ರೀ ನಿರೂಪಿಸಿದರು.

LEAVE A REPLY

Please enter your comment!
Please enter your name here