







ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಕೋಡಿಂಬಾಡಿ ಗ್ರಾಮ ಸಮಿತಿ ರಚಿಸಲು ಭಕ್ತಾದಿಗಳ ಸಭೆಯು ಜ.11ರಂದು ಬೆಳಿಗ್ಗೆ 11ಕ್ಕೆ ಕೋಡಿಂಬಾಡಿಯ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದ ಚಿನ್ಮಯಿ ಸಭಾಂಗಣದಲ್ಲಿ ನಡೆಯಲಿದೆ.


ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್ ಮತ್ತು ವ್ಯವಸ್ಥಾಪನ ಸಮಿತಿ ಸದಸ್ಯರ ಉಪಸ್ಥಿತಿಯಲ್ಲಿ ಭಕ್ತಾದಿಗಳ ಸಭೆ ಕರೆಯಲಾಗಿದೆ. ಎಲ್ಲಾ ಭಕ್ತಾದಿಗಳು ಹಾಗೂ ಪ್ರಮುಖರು ಉಪಸ್ಥಿತರಿರುವಂತೆ ಪ್ರಕಟನೆಯಲ್ಲಿ ತಿಳಿಸಿದ್ದಾರೆ.












