ಸಂತ ವಿಕ್ಟರನ ಬಾಲಿಕಾ ಪ್ರೌಢಶಾಲೆಯಲ್ಲಿ ಮಕ್ಕಳ ಮಾಸೋತ್ಸವ ಮಾಹಿತಿ ಕಾರ್ಯಗಾರ

0

ಪುತ್ತೂರು: ಪುತ್ತೂರುದ ಮುತ್ತು ಲಯನ್ಸ್ ಕ್ಲಬ್, ಲಿಯೋ ಕ್ಲಬ್ ಪುತ್ತೂರು, ನಿಯೋಸ್ ಅಕ್ಷಯಾನ ಪುತ್ತೂರು ಹಾಗೂ ಸಂತ ವಿಕ್ಟರ್ ಬಾಲಿಕಾ ಪ್ರೌಢಶಾಲೆ ಪುತ್ತೂರು ಇವರ ಸಹಯೋಗದೊಂದಿಗೆ, ಹಲ್ಲಿನ ಆರೋಗ್ಯವನ್ನು ಕಾಪಾಡಿಕೊಳ್ಳುವ ಮಾಹಿತಿ ಕಾರ್ಯಗಾರ ಸಂತ ವಿಕ್ಟರನ ಬಾಲಿಕಾ ಪ್ರೌಢಶಾಲೆಯಲ್ಲಿ ನಡೆಸಲಾಯಿತು.


ಅತಿಥಿಗಳು ಗಿಡಕ್ಕೆ ನೀರು ಹಾಕುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ಸಂಪನ್ಮೂಲ ವ್ಯಕ್ತಿಗಳಾದ ಡಾ. ಶ್ರೀಪ್ರಕಾಶ್ ಬಿ. ಮಾತನಾಡಿ ಹಲ್ಲುಗಳಲ್ಲಿ ಕಂಡು ಬರುವ ಸಮಸ್ಯೆಗಳ, ಹಲ್ಲುಗಳನ್ನು ಸರಿಯಾಗಿ ತೊಳೆಯುವ ವಿಧಾನ, ಆರೋಗ್ಯವಂತ ಹಲ್ಲುಗಳಿಗೆ ಬೇಕಾದ ಆಹಾರ ಪದ್ಧತಿ ಇತ್ಯಾದಿಗಳ ಬಗ್ಗೆ ಸೂಕ್ತ ಮಾಹಿತಿ ನೀಡಿದರು. ಅಧ್ಯಕ್ಷತೆ ವಹಿಸಿದ್ದ ಮುಖ್ಯಶಿಕ್ಷಕಿ ರೋಸಲಿನ್ ಲೋಬೊ ಸ್ವಾಗತಿಸಿ ಪ್ರಾಸ್ತವಿಕವಾಗಿ ಮಾತನಾಡಿದರು.

ಲಯನ್ಸ್ ಕ್ಲಬ್ ಮಾಜಿ ಖಂಜಾಜಿ ವತ್ಸಲ ಶೆಟ್ಟಿ, ಶಾಲಾ ನಾಯಕಿ ಮಾನ್ಯ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪುತ್ತೂರುದ ಮುತ್ತು ಲಯನ್ಸ್ ಕ್ಲಬ್‌ನ ಅಧ್ಯಕ್ಷೆ ವೇದಾವತಿ ವಂದಿಸಿರು. ಶಿಕ್ಷಕಿ ಶೈಲಾ ಮಸ್ಕರೇನಸ್ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here