ವಿಟ್ಲ: ಹಲ್ಲೆ, ದೊಂಬಿ, ನಿಷೇಧಿತ ಮಾದಕ ದ್ರವ್ಯ ಸೇವನೆ ಪ್ರಕರಣ – ಆರೋಪಿಯ ಗಡಿಪಾರು

0

ವಿಟ್ಲ: ಹಲ್ಲೆ, ದೊಂಬಿ, ನಿಷೇಧಿತ ಮಾದಕ ದ್ರವ್ಯ ಸೇವನೆ, ಏನ್ ಡಿ ಪಿ ಎಸ್ ಕಾಯ್ದೆಯಂತೆ 3 ಪ್ರಕರಣಗಳು ದಾಖಲಾಗಿರುವ ಹಿನ್ನೆಲೆಯಲ್ಲಿ ವಿಟ್ಲ ಠಾಣಾ ವ್ಯಾಪ್ತಿಯ ವ್ಯಕ್ತಿಯೋರ್ವರನ್ನು ಗಡಿಪಾರು ಮಾಡಲಾಗಿದೆ.

ಬಂಟ್ವಾಳ ತಾಲೂಕು ವಿಟ್ಲ ಕಸಬ ಗ್ರಾಮದ ನಿವಾಸಿ ಅಬ್ದುಲ್ ಖಾದರ್ ಯಾನೇ ಶೌಕತ್ ಗಡಿಪಾರಾದ ವ್ಯಕ್ತಿ.


ಈತನ ಮೇಲೆ ಮೇಲೆ ಹಲ್ಲೆ ದೊಂಬಿ, ನಿಷೇಧಿತ ಮಾದಕ ದ್ರವ್ಯ ಸೇವನೆ, ಏನ್ ಡಿ ಪಿ ಎಸ್ ಕಾಯ್ದೆಯಂತೆ 3 ಪ್ರಕರಣಗಳು ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಈತನನ್ನು ವಿಟ್ಲ ಪೊಲೀಸ್ ಠಾಣೆಯ ಠಾಣಾಧಿಕಾರಿಗಳ ವರದಿಯಂತೆ ಸಹಾಯಕ ಆಯುಕ್ತರು ಹಾಗೂ ಉಪವಿಭಾಗಿಯ ದಂಡಾಧಿಕಾರಿ ಮಂಗಳೂರು ರವರು ದಕ್ಷಿಣ ಕನ್ನಡ ಜಿಲ್ಲೆಯಿಂದ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಪೊಲೀಸ್ ಠಾಣಾ ವ್ಯಾಪ್ತಿಗೆ ಗಡಿಪಾರು ಮಾಡಿ ಆದೇಶ ಹೊರಡಿಸಿದ್ದರು. ಅವರ ಆದೇಶದಂತೆ ಜ. 8ರಂದು ದಕ್ಷಿಣ ಕನ್ನಡ ಜಿಲ್ಲೆಯಿಂದ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಪೊಲೀಸ್ ಠಾಣೆಗೆ ಸುರಕ್ಷಿತವಾಗಿ ಕಳುಹಿಸಲಾಗಿದೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here