






ಪುತ್ತೂರು: ಬೊಳುವಾರು ಶ್ರೀ ದುರ್ಗಾಪರಮೇಶ್ವರೀ ಮಲರಾಯ ಸಪರಿವಾರ ಕ್ಷೇತ್ರದಲ್ಲಿ ವಿವಿಧ ಕಾಮಗಾರಿಗಳು ನಡೆಯುತ್ತಿದ್ದು 1.50 ಕೋಟಿ ಮೊತ್ತದ ಅಭಿವೃದ್ಧಿ ಕಾಮಗಾರಿಗೆ ಶಾಸಕ ಅಶೋಕ್‌ಕುಮಾರ್ ರೈಯವರು ಚಾಲನೆ ನೀಡಲಿದ್ದಾರೆ.


ಜ.10ರಂದು ಸಂಜೆ ಶಾಸಕ ಅಶೋಕ್ ರೈಯವರು ಆಗಮಿಸಿ ಚಾಲನೆ ನೀಡಲಿದ್ದು, ರಾಜ್ಯ ಧಾರ್ಮಿಕ ಪರಿಷತ್ ಸದಸ್ಯ ಮಲ್ಲಿಕಾ ಪಕ್ಕಳರವರು ಮುಖ್ಯ ಅತಿಥಿಯಾಗಿ ಉಪಸ್ಥಿತರಿರುವರು. ಕ್ಷೇತ್ರದ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಪ್ರಕಟಣೆ ತಿಳಿಸಿದೆ.













