ಆನೆ ಹಾವಳಿ : ಶೀಘ್ರ ಪರಿಹಾರ ಮತ್ತು ಹಾವಳಿ ತಡೆಗೆ ಎಲಿಫೆಂಟ್ ಟಾಸ್ಕ್ ಫೋರ್ಸ್ ಕಾರ್ಯಾಚರಣೆ – ಸುಳ್ಯದ ನಿಯೋಗಕ್ಕೆ ಅರಣ್ಯ ಸಚಿವರ ಭರವಸೆ

0

ಸುಳ್ಯ : ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲು ಮಂಗಳೂರಿಗೆ ಆಗಮಿಸಿದ ಅರಣ್ಯ ಸಚಿವ ಈಶ್ವರ್. ಬಿ. ಖಂಡ್ರೆ ಉಪ ಅರಣ್ಯ ಸಂರಕ್ಷಣಾಧಿಕಾರಿಯವರ ನೂತನ ಕಟ್ಟಡ ಲೋಕಾರ್ಪಣೆಗೊಳಿಸಿ ಮಾನವ ಪ್ರಾಣಿ ಸಂಘರ್ಷ ತಪ್ಪಿಸಲು ಅಭಿವೃದ್ಧಿ ಪಡಿಸಲಾದ ತಂತ್ರಾoಶಕ್ಕೆ ಚಾಲನೆ ನೀಡಿದರು.


ಈ ಸಂದರ್ಭದಲ್ಲಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಕರ್ನಾಟಕ ಕಾರ್ಮಿಕರ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ. ಎಂ. ಶಹೀದ್, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ, ಸುಳ್ಯ ನಗರ ಯೋಜನಾ ಪ್ರಾಧಿಕಾರ ಅಧ್ಯಕ್ಷ ಕೆ. ಎಂ. ಮುಸ್ತಫ ಅವರ ಆನೆಯಿಂದ ಆಗುವ ಕೃಷಿ ನಾಶ, ಹಾವಳಿಯ ಕುರಿತು ಸಚಿವರ ಗಮನ ಸೆಳೆದಾಗ ಕೂಡಲೇ ಈ ಬಗ್ಗೆ ಕ್ರಮ ಕೈಗೊಳ್ಳುವುದಾಗಿ ಮತ್ತು ಎ ಟಿಎಫ್ ಪಡೆ ಶೀಘ್ರ ಕಾರ್ಯಾ ಚರಣೆಗೆ ಒದಗಿಸುವುದಾಗಿ ತಿಳಿಸಿದರು.

ದ. ಕ. ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಜಿಲ್ಲಾಧ್ಯಕ್ಷ ಭರತ್ ಮುಂಡೋಡಿ, ಶ್ರೀ ಕುಕ್ಕೇ ಸುಬ್ರಹ್ಮಣ್ಯ ದೇವಳದ ವ್ಯವಸ್ಥಾಪನ ಸಮಿತಿ ಮಾಜಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ಸುಳ್ಯತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷ ರಾಧಾಕೃಷ್ಣ ಬೊಳ್ಳೂರು ಮೊದಲಾದವರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here