ಜ.12: ಅರಿಯಡ್ಕ ವಲಯ ಭಜನೋತ್ಸವ ಮತ್ತು ಬಡಗನ್ನೂರು’ಎʼ ಒಕ್ಕೂಟದ ವಾರ್ಷಿಕೋತ್ಸವ ಕಾರ್ಯಕ್ರಮ

0

ಬಡಗನ್ನೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ)ಪುತ್ತೂರು, ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಪುತ್ತೂರು- ಇವುಗಳ ಸಂಯುಕ್ತ ಆಶ್ರಯದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಪರಮಪೂಜ್ಯ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಹಾಗೂ ಮಾತೃಶ್ರೀ ಹೇಮಾವತಿ ವಿ. ಹೆಗ್ಗಡೆಯವರ ಶುಭಾಶೀರ್ವಾದದೊಂದಿಗೆ ಅರಿಯಡ್ಕ ವಲಯದ ಭಜನೋತ್ಸವ ಮತ್ತು ಬಡಗನ್ನೂರು “ಎ” ಒಕ್ಕೂಟದ ವಾರ್ಷಿಕೋತ್ಸವ ಕಾರ್ಯಕ್ರಮ ಜ.12ರಂದು  ಬೆಳಗ್ಗೆ ಗಂ.10ಕ್ಕೆ ಪಡುಮಲೆ ಶ್ರೀ ಕೂವೆ ಶಾಸ್ತಾರ ವಿಷ್ಣುಮೂರ್ತಿ ದೇವಸ್ಥಾನದ ಸಭಾಂಗಣದಲ್ಲಿ ನಡೆಯಲಿದೆ.

ಸಭಾ ಕಾರ್ಯಕ್ರಮವನ್ನು ಶ್ರೀ ಕ್ಷೇತ್ರ ಪಡುಮಲೆ ಜೀರ್ಣೋದ್ಧಾರ ಸಮಿತಿ, ಅಧ್ಯಕ್ಷ ಶ್ರೀನಿವಾಸ ಭಟ್ ಚಂದುಕೂಡು ಉದ್ಘಾಟನೆ ಮಾಡಲಿದ್ದು, ಅರಿಯಡ್ಕ ವಲಯ ಭಜನಾ ಪರಿಷತ್ ವಲಯಾಧ್ಯಕ್ಷ ಗಂಗಾಧರ ರೈ ಎಂ.ಜಿ ರವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.

ಮುಖ್ಯ ಅತಿಥಿಗಳಾಗಿ SKDRDP ದ.ಕ -2 ಜಿಲ್ಲಾ ನಿರ್ದೇಶಕ ಎ.ಬಾಬು ನಾಯ್ಕ, ಕ್ಷೇ.ಧ.ಗ್ರಾ.ಯೋಜನೆ, ಅರಿಯಡ್ಕ ವಲಯ, ವಲಯಾಧ್ಯಕ್ಷರು ದಿನೇಶ್ ರೈ ಕುತ್ಯಾಳ, ಪಡುಮಲೆ ಶ್ರೀ ಕೂವೆಶಾಸ್ತಾರ ವಿಷ್ಣುಮೂರ್ತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ, ಅಧ್ಯಕ್ಷ  ಸತೀಶ್ ರೈ ಕಟ್ಟಾವು,  ಪುತ್ತೂರು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಅಧ್ಯಕ್ಷ

ಲೋಕೇಶ್ ಹೆಗ್ಡೆ ಯು,, ಶ್ರೀ ಕ್ಷೇತ್ರ ಧರ್ಮಸ್ಥಳ ದ.ಕ ಭಜನಾ ಪರಿಷತ್, ಜಿಲ್ಲಾ ಸಮನ್ವಯಾಧಿಕಾರಿ ಸಂತೋಷ್ ಪಿ. ಅಳಿಯೂರು, ಪುತ್ತೂರು ತಾಲೂಕು ಭಜನಾ ಪರಿಷತ್, ಅಧ್ಯಕ್ಷ ಲೋಕೇಶ್ ಬೆತ್ತೋಡಿ, ಬಡಗನ್ನೂರು ಗ್ರಾ. ಪಂ  ಅಧ್ಯಕ್ಷೆ ಪುಷ್ಪಲತಾ ದೇವಕಜೆ, ಶ್ರೀ ಕ್ಷೇತ್ರ ಪಡುಮಲೆ  ವ್ಯವಸ್ಥಾಪನಾ ಸಮಿತಿ ನಿಕಟಪೂರ್ವ ಅಧ್ಯಕ್ಷ ಮನೋಜ್ ರೈ ಪೇರಾಲು,, ಪ್ರಗತಿಪರ ಕೃಷಿಕ ಜಯಂತ ರೈ ಕುದ್ಯಾಡಿ, ಶ್ರೀ ಕೂವೆಶಾಸ್ತಾರ ವಿಷ್ಣುಮೂರ್ತಿ ಸಾಂಸ್ಕೃತಿಕ ಸೇವಾ ಸಮಿತಿ, ಅಧ್ಯಕ್ಷ ರಾಮಣ್ಣ ಗೌಡ ಬಸವಹಿತ್ಲು,  ಅರಿಯಡ್ಕ ವಲಯ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ವಲಯಾಧ್ಯಕ್ಷ ವಿಕ್ರಂ ರೈ ಸಾಂತ್ಯ , ಅಖಿಲ ಕರ್ನಾಟಕ ಜನಜಾಗೃತಿ

ನಿಕಟಪೂರ್ವ ವಲಯಾಧ್ಯಕ್ಷ ನಾರಾಯಣ ರೈ ಕುದ್ಯಾಡಿ, ತಿಲೋತ್ತಮ ಯಸ್.ರೈ ಪಡುಮಲೆ, ಬಡಗನ್ನೂರು “ಎ” ಒಕ್ಕೂಟದ ಅಧ್ಯಕ್ಷ ಸುಬ್ಬಯ್ಯ ರೈ ಹಲಸಿನಡಿ  ಭಾಗವಹಿಸಲಿದ್ದಾರೆ. 

ಈ ಕಾರ್ಯಕ್ರಮದಲ್ಲಿ ಒಕ್ಕೂಟದ ಸದಸ್ಯರೆಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿ ಗೊಳಿಸುವಂತೆ  ಅರಿಯಡ್ಕ ವಲಯ ಮೇಲ್ವಿಚಾರಕ  ಹರೀಶ್ ಕುಲಾಲ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here