







ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ ಇದರ ವತಿಯಿಂದ ಮಂಗಳೂರಿನಲ್ಲಿ ನಡೆದ ಜಿಲ್ಲಾಮಟ್ಟದ ವಿಶೇಷ ಚೇತನ ವಿದ್ಯಾರ್ಥಿಗಳ ಕ್ರೀಡಾಕೂಟದಲ್ಲಿ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಮುಂಡೂರು ಇಲ್ಲಿನ 8ನೇ ತರಗತಿಯ ವಿದ್ಯಾರ್ಥಿ ಶ್ರೀತನ್ ಬಿ ಗುಂಡು ಎಸೆತ ಹಾಗೂ ಈಟಿ ಎಸೆತ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾನೆ.


ಇವನಿಗೆ ಶಾಲಾ ದೈಹಿಕ ಶಿಕ್ಷಣ ಶಿಕ್ಷಕಿ ವನಿತಾ ಬಿ ಇವರು ತರಬೇತಿಯನ್ನು ನೀಡಿರುತ್ತಾರೆ ಎಂದು ಶಾಲಾ ಮುಖ್ಯ ಗುರುಗಳಾದ ವಿಜಯ ಪಿ ತಿಳಿಸಿರುತ್ತಾರೆ.













