






ಕಾಣಿಯೂರು: ಶಾಲಾ ಶಿಕ್ಷಣ ಇಲಾಖೆಯ ಹಾಗೂ ನಾಣಿಲ ಸ.ಹಿ.ಪ್ರಾ.ಶಾಲೆ ಇಕೋ ಕ್ಲಬ್ ವತಿಯಿಂದ ಪರಿಸರ ಸಂರಕ್ಷಣೆ ಬಗ್ಗೆ ಮಾಹಿತಿ ಕಾರ್ಯಗಾರವು ನಡೆಯಿತು.


ಸಂಪನ್ಮೂಲ ವ್ಯಕ್ತಿಯಾಗಿದ್ದ ಸವಣೂರು ಗ್ರಾಮ ಪಂಚಾಯತ್ ಸದಸ್ಯ ಗಿರಿಶಂಕರ ಸುಲಾಯರವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಪರಿಸರ ನಾಶದಿಂದ ಪ್ರಾಣಿಗಳ ಮೇಲೆ ಆಗುವ ಪರಿಣಾಮ ಮತ್ತು ಪ್ರಾಣಿ, ಪಕ್ಷಿಗಳ ನಾಶದಿಂದ ಮನುಷ್ಯರ ಮೇಲೆ ಆಗುವ ಪರಿಣಾಮಗಳ ಬಗ್ಗೆ ಮಕ್ಕಳಿಗೆ ವಿವರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ವಸಂತ ದಲಾರಿ ವಹಿಸಿದ್ದರು. ಶಾಲಾ ಮುಖ್ಯಗುರು ಪದ್ಮಯ ಗೌಡ, ಇಕೋ ಕ್ಲಬ್ಬಿನ ನೋಡೆಲ್ ಆಗಿರುವ ವಿಜ್ಞಾನ ಸಹ ಶಿಕ್ಷಕ ಸುನಿಲ್ ಸಹಕರಿಸಿದರು. ಸಹ ಶಿಕ್ಷಕಿ ಮೋಹಿನಿ ಎನ್ ಸ್ವಾಗತಿಸಿ, ವಿದ್ಯಾರ್ಥಿಗಳಾದ ಜಯಲಕ್ಷ್ಮಿ, ವರ್ಷಿಕ ಡಿ.ವಿ, ಶೌರ್ಯ, ವರ್ಣಿಕ ಡಿ. ವಿ ಪ್ರಾರ್ಥಿಸಿದರು. ಸಹ ಶಿಕ್ಷಕಿ ನಂದಿನಿ ವಂದಿಸಿದರು.













