ಬೆಳ್ಳಿಪ್ಪಾಡಿ: ಗ್ರಾಮಾಭಿವೃದ್ಧಿ ಯೋಜನೆಯಿಂದ ಉಚಿತ ಆರೋಗ್ಯ ತಪಾಸಣಾ ಕಾರ್ಯಕ್ರಮ

0

ಪುತ್ತೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಪುತ್ತೂರು ತಾಲೂಕು ಇದರ ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಲ್ಲಿ ಪ್ರಗತಿ ಬಂಧು ಸ್ವ ಸಹಾಯ ಸಂಘಗಳ ಒಕ್ಕೂಟ ಬೆಳ್ಳಿಪ್ಪಾಡಿ ಬನ್ನೂರು ವಲಯ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬನ್ನೂರು ವಲಯ, ಹಾಲು ಉತ್ಪಾದಕರ ಸಹಕಾರಿ ಸಂಘ ಬೆಳ್ಳಿಪಾಡಿ, ಲಯನ್ಸ್ ಕ್ಲಬ್ ಪುತ್ತೂರು, ಮಹಿಳಾ ಹಾಲು ಉತ್ಪಾದಕರ ಸಹಕಾರ ಸಂಘ ಕೊಡಿಮರ, ಶ್ರೀ ಸುಬ್ರಹ್ಮಣ್ಯ ಭಜನಾ ಮಂಡಳಿ ಬೆಳ್ಳಿಪಾಡಿ ಇದರ ಸಹಕಾರದೊಂದಿಗೆ ಪ್ರಗತಿ ಹಾಸ್ಪಿಟಲ್ ಪುತ್ತೂರು ಹಾಗೂ ಪ್ರಸಾದ್ ನೇತ್ರಾಲಯ ಪುತ್ತೂರು ಇಲ್ಲಿಯ ತಜ್ಞ ವೈದ್ಯರಿಂದ ಉಚಿತ ಆರೋಗ್ಯ ತಪಾಸಣಾ ಕಾರ್ಯಕ್ರಮ ನಡೆಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೇಂದ್ರದ ಸದಸ್ಯರಾದ ಸುಮಿತ್ರ ವಹಿಸಿದ್ದರು. ಕಾರ್ಯಕ್ರಮದ ಉದ್ಘಾಟನೆಯನ್ನು ಬೆಳ್ಳಿಪ್ಪಾಡಿ ಹಾಲು ಉತ್ಪಾದಕ ಸಹಕಾರಿ ಸಂಘದ ಅಧ್ಯಕ್ಷ ಕೊರಗಪ್ಪ ಗೌಡ ನೆರವೇರಿಸಿ ಮಾತನಾಡಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕ್ರಮಗಳು ಅದೆಷ್ಟೋ ಜನರ ಬದುಕನ್ನು ಹಸನಗೊಳಿಸಿದೆ ಎಂದ ಅವರು ಆರೋಗ್ಯದ ಬಗ್ಗೆ ಪ್ರತಿಯೊಬ್ಬರು ಹೆಚ್ಚಿನ ಕಾಳಜಿ ವಹಿಸಿ ಎಂದು ಶುಭ ಹಾರೈಸಿದರು. ಯೋಜನೆಯ ದಕ್ಷಿಣ ಕನ್ನಡ 2 ಜಿಲ್ಲೆಯ ಜಿಲ್ಲಾ ನಿರ್ದೇಶಕ ಬಾಬು ನಾಯ್ಕ್ ಮಾತನಾಡುತ್ತ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಗಳ ಬಗ್ಗೆ ಹಾಗೂ ಜ್ಞಾನವಿಕಾಸ ಕಾರ್ಯಕ್ರಮದ ಮೂಲಕ ಮಹಿಳೆಯರು ತಮ್ಮ ಬದುಕಿನಲ್ಲಿ ಬದಲಾವಣೆ ಕಂಡಿರುವ ಬಗ್ಗೆ ಸ್ವ ಉದ್ಯೋಗಕ್ಕೆ ಹೆಚ್ಚಿನ ಪ್ರೇರಣೆ ನೀಡಿರುವ ಬಗ್ಗೆ ಆರೋಗ್ಯವೇ ಭಾಗ್ಯ ಎಂಬಂತೆ ಆರೋಗ್ಯದ ಬಗ್ಗೆ ಹೆಚ್ಚಿನ ಗಮನಹರಿಸಿ ಎಂದು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.


ಪ್ರಗತಿ ಹಾಸ್ಪಿಟಲ್ ಎಜುಕೇಶನ್ ಟ್ರಸ್ಟ್‌ನ ಆಡಳಿತ ಅಧಿಕಾರಿ ಪ್ರೀತ ಹೆಗ್ಡೆ ಮಾತನಾಡಿ, ಆರೋಗ್ಯದಲ್ಲಿ ಸಣ್ಣ ಸಣ್ಣ ಬದಲಾವಣೆಗಳು ಕಂಡುಬಂದರು ವೈದ್ಯರನ್ನು ಭೇಟಿ ಮಾಡಿ ಚಿಕಿತ್ಸೆಯನ್ನು ಪಡೆದುಕೊಳ್ಳಿ ಎಂದು ಹೇಳಿ ಆರೋಗ್ಯದ ಬಗ್ಗೆ ಮಾಹಿತಿಯನ್ನು ನೀಡಲಾಯಿತು.

ಕಾರ್ಯಕ್ರಮದಲ್ಲಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ವಲಾಯಾಧ್ಯಕ್ಷ ರಾಮಣ್ಣ ಗುಂಡೋಲೆ, ವಲಯಾಧ್ಯಕ್ಷ ಮನೋಹರ್ ಗೌಡ, ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ವಾಸುದೇವ ಆಚಾರ್ಯ, ಲಯನ್ಸ್ ಕ್ಲಬ್ ಪುತ್ತೂರಿನ ಅಧ್ಯಕ್ಷ ಟಿ. ಪ್ರೇಮಲತಾ ರಾವ್, ಜ್ಞಾನವಿಕಾಸ ಕೇಂದ್ರದ ಸದಸ್ಯರು, ಒಕ್ಕೂಟದ ಪದಾಧಿಕಾರಿಗಳು, ಸದಸ್ಯರು ಇತರ ಸದಸ್ಯರು ಉಪಸ್ಥಿತರಿದ್ದರು. ಜ್ಞಾನವಿಕಾಸ ಕೇಂದ್ರದ ಸದಸ್ಯೆ ಜಲಜಾಕ್ಷಿ ಸ್ವಾಗತಿಸಿದರು. ಕೇಂದ್ರದ ಸದಸ್ಯೆ ಭವ್ಯ ವಂದಿಸಿದರು. ಜ್ಞಾನವಿಕಾಸ ಸಮನ್ವಯಾಧಿಕಾರಿ ಕಾವ್ಯಶ್ರೀ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here