ನಾಣಿಲ ಶಾಲೆಯಲ್ಲಿ ಪೋಷಕರ ಕ್ರೀಡಾಕೂಟ

0

ಕಾಣಿಯೂರು: ಸ.ಹಿ.ಪ್ರಾ.ಶಾಲೆ ನಾಣಿಲದಲ್ಲಿ ಮಕ್ಕಳ ಪ್ರತಿಭಾ ಪುರಸ್ಕಾರದ ಅಂಗವಾಗಿ ಪೋಷಕರಿಗೆ ಕ್ರೀಡಾಕೂಟವನ್ನು ಏರ್ಪಡಿಸಲಾಯಿತು. ಕ್ರೀಡಾಕೂಟವನ್ನು ನಾಣಿಲ ಶಾಲಾ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ನೂತನ್ ಭಟ್ ಮಾಚಿಲ ಅವರು ಉದ್ಘಾಟಿಸಿ ಶುಭಹಾರೈಸಿದರು. ಕಾರ್ಯಕ್ರಮದಲ್ಲಿ ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ವಸಂತ ದಲಾರಿ, ಮುಖ್ಯಗುರು ಪದ್ಮಯ ಗೌಡ, ಸಹ ಶಿಕ್ಷಕ ಸುನಿಲ್, ಗೌರವ ಶಿಕ್ಷಕಿ ಶಿಶ್ಮಿತಾ ರೈ ಕ್ರೀಡಾಕೂಟವನ್ನು ನಡೆಸಿಕೊಟ್ಟರು. ಶಾಲಾ ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷೆ ಶೋಭಾ ಬಾಕಿಲ, ಶಾಲಾ ಅಭಿವೃದ್ಧಿ ಸಮಿತಿಯ ಸದಸ್ಯರುಗಳು, ಪೋಷಕರು ಕ್ರೀಡಾಕೂಟದಲ್ಲಿ ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here