ಮಾಣಿ: 1001 ಗಣಗಳಿಗೆ ವನಭೋಜನ

0

ಪುತ್ತೂರು: ಬಂಟ್ವಾಳ ತಾಲೂಕಿನ ಮಾಣಿ ಗ್ರಾಮದ ಗ್ರಾಮ ದೈವಕ್ಕೆ ಸಂಬಂಧಪಟ್ಟಂತೆ 1001 ಗಣಗಳಿಗೆ ವನಭೋಜನ ಕಾರ್ಯಕ್ರಮ ನಡೆಯಿತು.

ಅನಾದಿಕಾಲದಿಂದಲೂ ನಡೆದುಕೊಂಡು ಬಂದಂತೆ ಮಾಣಿ ಶ್ರೀ ಉಳ್ಳಾಲ್ತಿ ದೈವದ ಮೆಚ್ಚಿ ಜಾತ್ರೆಯ ಮೊದಲು ಮಾಣಿ ಗ್ರಾಮದ ಉಳ್ಳಾಲ್ತಿ  ದೇವಸ್ಥಾನದ ವಠಾರದಲ್ಲಿ ಹಾಗೂ ಅರೆಬೆಟ್ಟುವಿನಲ್ಲಿ ಒಂದೇ ದಿನ ವನಭೊಜನ ಕಾರ್ಯಕ್ರಮ ನಡೆಯುತ್ತದೆ. ಅರೆಬೆಟ್ಟು ಗುತ್ತುವಿನಲ್ಲಿ ವರ್ಷಂಪ್ರತಿಯಂತೆ ಜರಗುವ ಕಂಬಳಕೋರಿಯಂದು ಈ ಎರಡು ಗ್ರಾಮದ ವನಭೋಜನಕ್ಕೆ ದಿನ ನಿಗದಿಯಾಗುತ್ತದೆ. ಆ ಪ್ರಕಾರ ಒಂದೇ ದಿನ ಎರಡು ಕಡೆಗಳಲ್ಲೂ ವನಭೋಜನಕ್ಕೆ ಮೀಸಲಿರಿಸಿದ ಜಾಗದಲ್ಲಿ ಮಾಣಿಗುತ್ತು ಮತ್ತು ಅರೆಬೆಟ್ಟು ಗುತ್ತುವಿನ ಮುಖ್ಯಸ್ಥರ ಮುಂದಾಳತ್ವದಲ್ಲಿ ಗ್ರಾಮಸ್ಥರ ಕೂಡುವಿಕೆಯಲ್ಲಿ ಜರಗುತ್ತದೆ.

LEAVE A REPLY

Please enter your comment!
Please enter your name here