







ನೆಲ್ಯಾಡಿ: ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನ ನೆಲ್ಯಾಡಿ-ಕೌಕ್ರಾಡಿ ಇಲ್ಲಿ 48ನೇ ವರ್ಷದ ಮಕರ ಜ್ಯೋತಿ ಉತ್ಸವ ಹಾಗೂ ಭಜನಾ ಮಹೋತ್ಸವದ ಸಮಾರೋಪ ಸಮಾರಂಭ ಜ.14ರಂದು ಪ್ರಾತ:ಕಾಲ 6.15ರಿಂದ ಜ.15ರ ಪ್ರಾತ:ಕಾಲ 6.30ರ ವರೆಗೆ ನಡೆಯಲಿದೆ.


ಜ.14ರಂದು ಪ್ರಾತ:ಕಾಲ 6ಕ್ಕೆ ಪ್ರಧಾನ ಅರ್ಚಕರಾದ ಶ್ರೀಧರ ನೂಜಿನ್ನಾಯರ ಪೌರೋಹಿತ್ಯದಲ್ಲಿ ಶ್ರೀ ಅಯ್ಯಪ್ಪಸ್ವಾಮಿ ದೇವರಿಗೆ ಉಷಾಪೂಜೆ, ನಂತರ ಮಕರ ಸಂಕ್ರಾಂತಿಯ ಧಾರ್ಮಿಕ ಕಾರ್ಯಕ್ರಮ ನಡೆಯಲಿದೆ. 5.30ಕ್ಕೆ ಶ್ರೀ ಮಹಾಗಣಪತಿ ಹೋಮ, 8ರಿಂದ ಸೀಯಾಳಾಭಿಷೇಕ, 9.30ರಿಂದ ಅಶ್ವಥ ಕಟ್ಟೆಯಲ್ಲಿ ಅಶ್ವಥ ಪೂಜೆ ಪ್ರಾರಂಭ, 11.30ಕ್ಕೆ ಶ್ರೀ ಮಹಾರಂಗಪೂಜೆ, ಮಹಾಪೂಜೆ, ಪ್ರಸಾದ ವಿತರಣೆ ಬಳಿಕ ಮಹಾ ಅನ್ನಸಂತರ್ಪಣೆ ನಡೆಯಲಿದೆ.



ಸಾಂಸ್ಕೃತಿಕ ಕಾರ್ಯಕ್ರಮ;
ಮಧ್ಯಾಹ್ನ 1ರಿಂದ ವಿದುಷಿ ಸುರೇಖಾಹರೀಶ್‌ರವರ ಶಿಷ್ಯವೃಂದ ಉಕ್ಷಿಪ್ತನೃತ್ಯ ಕಲಾ ಶಾಲೆ ನೆಲ್ಯಾಡಿ-ಮಂಗಳೂರು ಇವರಿಂದ ನೃತ್ಯ ಸಿಂಚನ-ಭರತ ವೈಭವ’ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಸಂಜೆ 6ಕ್ಕೆ ನೀಲಾಂಜನ ದೀಪದರ್ಶನ ಮೆರವಣಿಗೆ, 7ಕ್ಕೆ ದೀಪಾರಾಧನೆ, 7.30ಕ್ಕೆ ಪುಷ್ಪಾಭಿಷೇಕ ನಡೆಯಲಿದೆ.
ಧಾರ್ಮಿಕ ಸಭೆ;
ಜ.14ರಂದು ರಾತ್ರಿ 8ಕ್ಕೆ ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ರವಿಚಂದ್ರ ಹೊಸವಕ್ಲು ಅವರ ಅಧ್ಯಕ್ಷತೆಯಲ್ಲಿ ಧಾರ್ಮಿಕ ಸಭೆ ನಡೆಯಲಿದ್ದು ಶ್ರೀ ಕ್ಷೇತ್ರ ಸೌತಡ್ಕದ ಪ್ರಧಾನ ಅರ್ಚಕರಾದ ಸತ್ಯಪ್ರಿಯ ಕಲ್ಲೂರಾಯ ಧಾರ್ಮಿಕ ಉಪನ್ಯಾಸ ನೀಡಲಿದ್ದಾರೆ. ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಇಂಜಾಡಿ ಉದ್ಘಾಟಿಸಲಿದ್ದಾರೆ. ಶಾಸಕಿ ಭಾಗೀರಥಿ ಮುರುಳ್ಯ, ನೆಲ್ಯಾಡಿ ಅಶ್ವಿನಿ ಫ್ಯುಯೆಲ್ಸ್‌ನ ಮಾಲಕ ಪ್ರಕಾಶ್ ಡಿ.ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಯಕ್ಷಗಾನ ಬಯಲಾಟ;
ರಾತ್ರಿ 9.30ರಿಂದ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಮುಲ್ಕಿ ಮಂಗಳೂರು ಇವರಿಂದ ಈ ವರ್ಷದ ನೂತನ ಪ್ರಸಂಗ ’ ಬನತ ಬೆಮ್ಮೆರ್’ ತುಳು ಯಕ್ಷಗಾನ ಬಯಲಾಟ ನಡೆಯಲಿದೆ. ರಾತ್ರಿ 12ಕ್ಕೆ ಮಹಾಪೂಜೆ, ಬಳಿಕ ಪ್ರಸಾದ ವಿತರಣೆ ನಡೆಯಲಿದೆ. ಜ.15ರಂದು ಬೆಳಿಗ್ಗೆ 5.30ಕ್ಕೆ ಭಜನಾ ಮಂಗಳೋತ್ಸವ ನಡೆಯಲಿದೆ ಎಂದು ದೇವಸ್ಥಾನದ ಪ್ರಕಟಣೆ ತಿಳಿಸಿದೆ.









