ಜ.15: ಡಾ.ನಝೀರ್ ಅಹಮದ್ ಕ್ಲಿನಿಕ್ ನಲ್ಲಿ ಮಾಸಿಕ ಥೈರಾಯಿಡ್ ಗ್ರಂಥಿಯ ತಪಾಸಣೆ, HBA1C, ಶುಗರ್, ಕೊಲೆಸ್ಟ್ರಾಲ್, ಬಿ.ಎಂ.ಡಿ ಉಚಿತ ತಪಾಸಣೆ

0

ಪುತ್ತೂರು: ವೈದ್ಯಕೀಯ ತಜ್ಞ ಡಾ.ನಝೀರ್ ಅಹಮ್ಮದ್ ಡಯಾಬಿಟಿಸ್ ಸೆಂಟರ್, ರೋಟರಿ ಕ್ಲಬ್ ಪುತ್ತೂರು ಮತ್ತು ರೋಟರ್ಯಾಕ್ಟ್ ಕ್ಲಬ್ ಪುತ್ತೂರು ಇದರ ಆಶ್ರಯದಲ್ಲಿ ಮಾಸಿಕ ಥೈರಾಯಿಡ್ ಗ್ರಂಥಿಯ ತಪಾಸಣೆ, HBA1C, ಶುಗರ್, ಕೊಲೆಸ್ಟ್ರಾಲ್, ಬಿ.ಎಂ.ಡಿ ಉಚಿತ ತಪಾಸಣೆಯು ಜ.15 ರಂದು ಕಲ್ಲಾರೆ ಕೃಷ್ಣ ಆರ್ಕೇಡ್ ನಲ್ಲಿನ ಡಾ.ನಝೀರ್ ಅಹಮದ್ ರವರ ಕ್ಲಿನಿಕ್ ನಲ್ಲಿ ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೆ ಜರಗಲಿದೆ.


ಅತಿಯಾದ ದಣಿವು, ಸುಸ್ತು, ನಿತ್ರಾಣ, ಮಲಬದ್ಧತೆ ಅಥವಾ ಅತಿಸಾರ, ಶೀತಕ್ಕೆ ಅಥವಾ ತಾಪಕ್ಕೆ ಅಸಹಿಷ್ಣುತೆ, ಕೂದಲು ಉದುರುವಿಕೆ, ನೆನಪಿನ ಶಕ್ತಿ ಕುಂದುವುದು, ಏಕಾಗ್ರತೆ ಕಷ್ಟವಾಗುವುದು, ತೂಕ ಹೆಚ್ಚಾಗುವುದು ಅಥವಾ ಕಡಿಮೆ ಆಗುವುದು, ಹೆಂಗಸರಿಗೆ ಅತಿಯಾದ ಮಾಸಿಕ ಸ್ರಾವ ಅಥವಾ ನಿಯಮ ತಪ್ಪಿದ ಮಾಸಿಕ ಸ್ರಾವ, ಮೃದುವಾದ ಕರ್ಕಶ ಸ್ವರ, ಗಂಟಲಿನಲ್ಲಿ ಊದುಕೊಳ್ಳುವಿಕೆ, ಅಧಿಕ ಎದೆ ಬಡಿತ ಅಥವಾ ರಕ್ತದೊತ್ತಡವುಳ್ಳವರು ಶಿಬಿರದಲ್ಲಿ ಪಾಲ್ಗೊಳ್ಳಬಹುದು.


ಇದರಲ್ಲಿ HBA1C ಹಾಗೂ ಲಿಪಿಡ್ ಪ್ರೊಫೈಲ್ ಮೊದಲು ನೋಂದಾಯಿಸಿದ 50 ಮಂದಿಗೆ ಮಾತ್ರ ಪರೀಕ್ಷೆ ಮಾಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಹಾಗೂ ನೋಂದಾವಣೆಗಾಗಿ 9481451929 ನಂಬರಿಗೆ ಸಂಪರ್ಕಿಸಬಹುದು ಎಂದು ಡಾ.ನಝೀರ್ ಅಹಮದ್ ಡಯಾಬಿಟಿಸ್ ಸೆಂಟರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಧುಮೇಹ ಕಣ್ಣಿನ ತಪಾಸಣಾ ಶಿಬಿರ..
ಜ.15 ರಂದು ಕ್ಲಿನಿಕ್ ನಲ್ಲಿ ಬೆಳಿಗ್ಗೆಯಿಂದ ಸಂಜೆವರೆಗೆ ಮಧುಮೇಹ ಕಣ್ಣಿನ ತಪಾಸಣಾ ಶಿಬಿರ ಜರಗಲಿದೆ. ಮಧುಮೇಹ ಇರುವವರಲ್ಲಿ ಕಣ್ಣಿನ ನರ ಹಾನಿ (ಡಯಾಬಿಟಿಕ್ ರೆಟಿನೋಪತಿ) ಯಾವುದೇ ಲಕ್ಷಣಗಳಿಲ್ಲದೇ ಬರುತ್ತದೆ. ಸಮಯಕ್ಕೆ ಕಣ್ಣಿನ ತಪಾಸಣೆ ಮಾಡಿದರೆ ದೃಷ್ಟಿ ಕಳೆದುಕೊಳ್ಳುವುದನ್ನು ತಡೆಯಬಹುದು. ವಾರ್ಷಿಕ ಕಣ್ಣಿನ ತಪಾಸಣೆ ಮಧುಮೇಹಿಗಳಿಗೆ ಅತ್ಯಾವಶ್ಯಕ. ಅತ್ಯಾಧುನಿಕ ಫಂಡಸ್ ಕ್ಯಾಮೆರಾ ಸಲಕರಣೆಯಿಂದ ರೆಟಿನೋಪತಿ ತಪಾಸಣೆಯನ್ನು ಮಾಡಬಹುದಾಗಿದೆ ಎಂದು ಡಾ.ನಝೀರ್ ಅಹಮದ್ ಕ್ಲಿನಿಕ್ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here