






ಜ.15 ಧ್ವಜಾರೋಹಣ
ಜ.17 ದೇವರ ದರ್ಶನ ಬಲಿ
ಜ.18 ರಥೋತ್ಸವ
ಜ.19 ಅವಭೃತ ಸ್ನಾನ, ಧ್ವಜಾವರೋಹಣ


ಪುತ್ತೂರು: ಕೆದಿಲ ಗ್ರಾಮದ ದೇಂತಡ್ಕ ಶ್ರೀ ವನದುರ್ಗಾ ದೇವಸ್ಥಾನದಲ್ಲಿ ಜಾತ್ರಾ ಮಹೋತ್ಸವವು ಜ.15ರಿಂದ ಪ್ರಾರಂಭಗೊಂಡು ಜ.೨೦ರ ತನಕ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ವಿವಿಧ ಧಾರ್ಮಿಕ, ವೈದಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.



ಜ.15ರಂದು ಜಾತ್ರಾ ಮಹೋತ್ಸವಕ್ಕೆ ಚಾಲನೆ ದೊರೆಯಲಿದ್ದು ಬೆಳಿಗ್ಗೆ ಗಣಪತಿ ಹವನ, ಸಾಮೂಹಿಕ ಪ್ರಾರ್ಥನೆ, ಉಗ್ರಾಣ ಮುಹೂರ್ತ, ಸಂಜೆ ಹಸಿರು ಹೊರೆಕಾಣಿಕೆ ಸಮರ್ಪಣೆ, ಸಂಜೆ ನಂತರ ಧ್ವಜಾರೋಹಣ, ರಾತ್ರಿ ಶ್ರೀ ದೇವರ ಬಲಿ ಹೊರಟು ಉತ್ಸವ ವಸಂತ ಕಟ್ಟೆಪೂಜೆ ನಡೆಯಲಿದೆ.
ಜ.16ರಂದು ಬೆಳಿಗ್ಗೆ ಶ್ರೀ ದೇವರ ಬಲಿ ಹೊರಟು ಉತ್ಸವ, ಮಧ್ಯಾಹ್ನ ಕಲಶಾಭಿಷೇಕ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ಸಂಜೆ ಕಿಶೋರ್ ಪೆರ್ಲ ಬಳಗದವರಿಂದ ಭಕ್ತಿ ರಸಮಂಜರಿ, ರಾತ್ರಿ ದೇವರ ಬಲಿ ಹೊರಟು ಉತ್ಸವ, ವಿಶೇಷ ವಸಂತ ಕಟ್ಟೆಪೂಜೆ, ನೃತ್ಯ ಬಲಿ ನಡೆಯಲಿದೆ.
ಜ.17 ದೇವರ ದರ್ಶನ ಬಲಿ:
ಜಾತ್ರೋತ್ಸವದಲ್ಲಿ ಜ.17ರಂದು ಬೆಳಿಗ್ಗೆ ದೇವರ ಬಲಿ ಹೊರಟು ಉತ್ಸವ, ದರ್ಶನ, ಬಟ್ಟಲು ಕಾಣಿಕೆ, ಕೆದಿಲದಿಂದ ಮಹಾದೈವಗಳ ಭಂಡಾರ ಆಗಮನ, ದೇವರ ಭೇಟಿ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ಸಂಜೆ ಶ್ರೀಮೂಕಾಂಬಿಕಾ ಕಲ್ಚರಲ್ ಅಕಾಡೆಮಿಯವರಿಂದ ನೃತ್ಯಾಂಜಲಿ. ರಾತ್ರಿ ಶ್ರೀದೇವರ ಬಲಿ ಹೊರಟು ಉತ್ಸವ, ಪಲ್ಲಕಿ ಉತ್ಸವ, ಉಯ್ಯಾಲೋತ್ಸವ ನಡೆಯಲಿದೆ.
ಜ.18 ರಥೋತ್ಸವ:
ಜ.18ರಂದು ಬೆಳಿಗ್ಗೆ ಶ್ರೀದೇವರ ಬಲಿ ಹೊರಟು ಉತ್ಸವ, ಕಲಶಾಭಿಷೇಕ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ಸಂಜೆ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಲಿದ್ದು ಎಡನೀರು ಮಠದ ಶ್ರೀಸಚಿದಾನಂದ ಭಾರತೀ ಸ್ವಾಮೀಜಿಯವರು ಆಶೀರ್ವಚನ ನೀಡಲಿದ್ದಾರೆ. ನೋಟರಿ ವಕೀಲರು ಬಂಟ್ವಾಳ ವಕೀಲರ ಸಂಘದ ಮಾಜಿ ಅಧ್ಯಕ್ಷ ಯಂ. ಅಶ್ವಿನ್ ಕುಮಾರ್ ರೈ ಅಧ್ಯಕ್ಷತೆ ವಹಿಸಲಿದ್ದಾರೆ. ಎಸ್‌ಎಲ್‌ವಿ ಬುಕ್‌ಹೌಸ್‌ನ ದಿವಾಕರ ದಾಸ್ ನೇರ್ಲಾಜೆ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ರಾತ್ರಿ ದೀಪೋತ್ಸವ, ಕ್ಷೇತ್ರದ ಮಹಾದೈವ ರಕ್ತೇಶ್ವರಿಯ ಭೇಟಿ ಹಾಗೂ ರಾತ್ರಿ ರಥೋತ್ಸವ ನಡೆಯಲಿದೆ.
ಜ.19 ಅವಭೃತ ಸ್ನಾನ, ಧ್ವಜಾವರೋಹಣ:
ಜ.19ರಂದು ಬೆಳಿಗ್ಗೆ ಕವಾಟೋದ್ಘಾಟನೆ, ತೈಲಾಭಿಷೇಕ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ಸಂಜೆ ದೇವರ ಬಲಿ ಹೊರಟು ಮೆರವಣಿಗೆ, ಅವಭೃತ ಸ್ನಾನ, ಧ್ವಜಾವರೋಹಣ, ಕಲ್ಲಾಜೆ ಪಂಚವಟಿ ದೇವರ ಮಂಟಪದಲ್ಲಿ ಕಟ್ಟೆಪೂಜೆ, ರಾತ್ರಿ ಶ್ರೀ ಬಪ್ಪನಾಡು ಮೇಳದವರಿಂದ ‘ಬಪ್ಪನಾಡು ಕ್ಷೇತ್ರ ಮಹಾತ್ಮೆ’ ಎಂಬ ಯಕ್ಷಗಾನ ಬಯಲಾಟ ನಡೆಯಲಿದೆ.
ಜ.20ರಂದು ಬೆಳಿಗ್ಗೆ ಮಹಾಗಣಪತಿ ಹೋಮ, ಸಂಪ್ರೋಕ್ಷಣೆ, ಕಲಶಾಭಿಷೇಕ, ವೇದಪಾರಾಯಣ, ಸೀಯಾಳಾಭಿಷೇಕ, ಮಹಾಪೂಜೆ, ವೈದಿಕ ಮಂತ್ರಾಕ್ಷತೆ, ಅನ್ನಸಂತರ್ಪಣೆ, ಸಂಜೆ ಕಲಾಗ್ರಾಮ ಕಲ್ಲಡ್ಕ ಪ್ರಸ್ತುತ ಪಡಿಸುವ ‘ಚೋಮನ ದುಡಿ’ ಎಂಬ ನಾಟಕ ಪ್ರದರ್ಶನ ರಾತ್ರಿ ರಂಗಪೂಜೆ ಬಳಿಕ ಕ್ಷೇತ್ರದ ಗುಳಿಗ ದೈವದ ನೇಮೋತ್ಸವದೊಂದಿಗೆ ಜಾತ್ರಾ ಮಹೋತ್ಸವ ಸಂಪನ್ನಗೊಳ್ಳಲಿದೆ ಎಂದು ದೇವಸ್ಥಾನದ ಪ್ರಕಟಣೆ ತಿಳಿಸಿದೆ.










