ಭಕ್ತಕೋಡಿ: ಸ್ವಾಮಿ ವಿವೇಕಾನಂದ ಜನ್ಮದಿನಾಚರಣೆ ಪ್ರಯುಕ್ತ ಯುವ ಸಪ್ತಾಹಕ್ಕೆ ಚಾಲನೆ

0

ಪುತ್ತೂರು: ಜಿಲ್ಲಾಡಳಿತ, ದ.ಕ ಜಿಲ್ಲಾ ಪಂಚಾಯತ್ ಮಂಗಳೂರು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮಂಗಳೂರು, ದ.ಕ ಜಿಲ್ಲಾ ಯುವಜನ ಒಕ್ಕೂಟ ಮಂಗಳೂರು, ಸವಣೂರು ಯುವಕ ಮಂಡಲ, ಶ್ರೀ ಷಣ್ಮುಖ ಯುವಕ ಮಂಡಲ ಸರ್ವೆ, ಎಸ್.ಜಿ.ಎಂ ಪ್ರೌಢ ಶಾಲೆ ಸರ್ವೆ ಇವುಗಳ ಜಂಟಿ ಆಶ್ರಯದಲ್ಲಿ ಸ್ವಾಮಿ ವಿವೇಕಾನಂದರ ಜನ್ಮದಿನಾಚರಣೆಯ ಪ್ರಯುಕ್ತ ಯುವ ಸಪ್ತಾಹ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು ಅದರ ಉದ್ಘಾಟನಾ ಕಾರ್ಯಕ್ರಮವು ಭಕ್ತಕೋಡಿ ಎಸ್.ಜಿ.ಎಂ ಪ್ರೌಢಶಾಲೆಯಲ್ಲಿ ನಡೆಯಿತು.

ಎ.ಪಿ.ಎಂ.ಸಿ ಮಾಜಿ ಅಧ್ಯಕ್ಷ ದಿನೇಶ್ ಮೆದು ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸಂಪನ್ಮೂಲ ವ್ಯಕ್ತಿಯಾಗಿ ಸವಣೂರು ಸರಕಾರಿ ಪ್ರೌಢಶಾಲಾ ದೈ.ಶಿ.ಶಿಕ್ಷಕ ಮಾಮಚ್ಚನ್ ಭಾಗವಹಿಸಿದ್ದರು. ಅತಿಥಿಗಳಾಗಿ ಮುಂಡೂರು ಗ್ರಾ.ಪಂ ಸದಸ್ಯ ಕಮಲೇಶ್ ಸರ್ವೆದೋಳಗುತ್ತು, ಎಸ್.ಜಿ.ಎಂ ಪ್ರೌಢಶಾಲಾ ಆಡಳಿತ ಸಮಿತಿ ಸದಸ್ಯ ಶಶಿಧರ್ ಎಸ್.ಡಿ, ಷಣ್ಮುಖ ಯುವಕ ಮಂಡಲದ ಪ್ರಧಾನ ಕಾರ್ಯದರ್ಶಿ ಗೌತಮ್ ಪಟ್ಟೆಮಜಲು ಭಾಗವಹಿಸಿದ್ದರು. ಸಭಾಧ್ಯಕ್ಷತೆ ವಹಿಸಿದ್ದ ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಸುರೇಶ್ ರೈ ಸೂಡಿಮುಳ್ಳು ಮಾತನಾಡಿ ಜ.17ರವರೆಗೆ ಜಿಲ್ಲೆಯ ವಿವಿಧ ಕಡೆ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು ಜ.18ರಂದು ಪಂಜ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಸಮಾರೋಪ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು.

ಶ್ರೀ ಷಣ್ಮುಖ ಯುವಕ ಮಂಡಲದ ಅಧ್ಯಕ್ಷ ಗೌತಮ್‌ರಾಜ್ ಕರುಂಬಾರು ಸ್ವಾಗತಿಸಿದರು. ಎಸ್.ಜಿ.ಎಂ ಪ್ರೌಢಶಾಲಾ ಮುಖ್ಯ ಗುರು ಸೋಮಶೇಖರ ವಂದಿಸಿದರು. ವಿಧ್ಯಾರ್ಥಿಗಳು ಪ್ರಾರ್ಥಿಸಿದರು. ಶ್ರೀ ಷಣ್ಮುಖ ಯುವಕ ಮಂಡಲದ ಕಾರ್ಯಕಾರಿ ಸಮಿತಿ ಸದಸ್ಯ ಎಸ್.ಎಂ. ಶರೀಫ್ ಕಾರ್ಯಕ್ರಮ ನಿರೂಪಿಸಿದರು. ಯುವಕ ಮಂಡಲದ ಉಪಾಧ್ಯಕ್ಷ ಮನೋಜ್ ಸುವರ್ಣ ಸೊರಕೆ, ಸಂಘಟನಾ ಕಾರ್ಯದರ್ಶಿ ವಸಂತ್ ಪೂಜಾರಿ ಕೈಪಂಗಲದೋಳ, ಸದಸ್ಯ ಲಕ್ಷ್ಮಣ ಅಚಾರ್ಯ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here