ಆಲಂಕಾರು ಗ್ರಾ.ಪಂ ನಲ್ಲಿ ವಿಶೇಷಚೇತನರ ಸಮನ್ವಯ ಗ್ರಾಮಸಭೆ ಮತ್ತು ಮಹಿಳಾ ಗ್ರಾಮ ಸಭೆ

0

ಆಲಂಕಾರು: ಆಲಂಕಾರು ಗ್ರಾ.ಪಂ ನಲ್ಲಿ ವಿಶೇಷ ಚೇತನರ ಸಮನ್ವಯ ಗ್ರಾಮಸಭೆ ಮತ್ತು ಮಹಿಳಾ ಗ್ರಾಮ ಸಭೆಯು ಗ್ರಾ.ಪಂ ಅಧ್ಯಕ್ಷರಾದ ಸುಶೀಲ ರವರ ಅಧ್ಯಕ್ಷತೆಯಲ್ಲಿ ನಡೆಯಿತು.


ವಿಕಲಚೇತನರ ಇಲಾಖಾ ಮಾಹಿತಿ ವಿವಿದೋದ್ದೇಶ ಪುನರ್ವಸತಿ ಕಾರ್ಯಕರ್ತರಾದ ನವೀನ್ ಕುಮಾರ್ ರವರು ವಿಕಲಚೇತನರ ಮತ್ತು ಹಿರಿಯನಾಗರಿಕರ ಸಬಲೀಕರಣ ಇಲಾಖೆಯು 1988 ರಿಂದ ಪ್ರತ್ಯೇಕ ಇಲಾಖೆಯಾಗಿ ಕಾರ್ಯನಿರ್ವಹಿಸುತ್ತದೆ. ವಿಕಲಚೇತನರ ವ್ಯಕ್ತಿಗಳ ಹಕ್ಕುಗಳ ಕಾಯ್ದೆ 2016ರಲ್ಲಿರುವಂತೆ 21 ವಿಕಲತೆಯನ್ನು ಗುರುತಿಸಲಾಗಿದೆ. ವಿಶಿಷ್ಟ ಗುರುತಿನ ಚೀಟಿ (ಯುಡಿಐಡಿ) ಇದರಲ್ಲಿ ಸರ್ಕಾರದ ವಿವಿಧ ಸೌಲಭ್ಯಗಳನ್ನು ಪಡೆಯಲು ಉಪಯೋಗಿಸಿಕೊಳ್ಳಲಾಗುತ್ತದೆ ಎಂದು ತಿಳಿಸಿ ಸರಕಾರದಿಂದ
ವಿಶೇಷಚೇತನರಿಗೆ ಸಿಗುವ ಸೌವಲತ್ತುಗಳ ಬಗ್ಗೆ ತಿಳಿಸಿ , ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಮೂಲಕ ಹೆಚ್ಚಿನ ಸೌಲಭ್ಯಗಳನ್ನು ಪಡೆದುಕೊಳ್ಳುವಂತೆ ತಿಳಿಸಿದರು.


ಪುತ್ತೂರು ಮಹಿಳಾ ಸಾಂತ್ವನ ಕೇಂದ್ರದ ಬಿಂಧು ರವರು ಮಹಿಳಾ ಸಹಾಯವಾಣೆ 181ರ ಬಗ್ಗೆ ಮತ್ತುಕೌಟುಂಬಿಕ ದೌರ್ಜನ್ಯ ಕಾಯ್ದೆ 2005ರ ಅಡಿಯಲ್ಲಿ ಪ್ರಕರಣ ದಾಖಲಿಸುವ ಬಗ್ಗೆ ಮಾಹಿತಿ ನೀಡಿ, ಹದಿಹರೆಯದ ಮಕ್ಕಳಲ್ಲಿ ಆಗುತ್ತಿರುವ ಬದಲಾವಣೆಯಿಂದ ಸುರಕ್ಷಿತರಾಗಿರಲು ಪೋಷಕರು ತೆಗೆದುಕೊಳ್ಳಬೇಕಾದ ಜವಬ್ದಾರಿಯ ಬಗ್ಗೆ ತಿಳಿಸಿದರು.


ಅಂಗನವಾಡಿ ಮೇಲ್ವಿಚಾರಕಿ ಭವಾನಿ ರವರು ಮಹಿಳೆಯರಿಗೆ ಸರಕಾರದ ಯೋಜನೆಗಳ ಮಾಹಿತಿ ನೀಡಿ ಬಾಲ್ಯ ವಿವಾಹ, ಪೌಷ್ಟಿಕ ಆಹಾರದ ಸೇವನೆಯ ಬಗ್ಗೆ ತಿಳಿಸಿದರು.
ಆಲಂಕಾರು ಆರೋಗ್ಯ ಉಪಕೇಂದ್ರದ ಸಮುದಾಯ ಆರೋಗ್ಯ ಅಧಿಕಾರಿ ಬಿನ್ಸಿ ರವರು ಎಂಡೋಸಲ್ಫಾನ್ ಸಂತ್ರಸ್ತರಿಗೆ ಪ್ರತಿ ತಿಂಗಳು ಉಚಿತ ಆರೋಗ್ಯ ವೈದ್ಯಕೀಯ ತಪಾಸಣಾ ಶಿಬಿರದ ಬಗ್ಗೆ ಮಾಹಿತಿ ನೀಡಿದರು.


ಅಮೂಲ್ಯ ಸಾಕ್ಷರಥ ದ ಆಪ್ತ ಸಮಲೋಚಕಿ ಗೀತಾವಿಜಯ್ ರವರು ಪ್ರಧಾನಮಂತ್ರಿ ಜೀವನ್ ಜ್ಯೋತಿ ವಿಮಾ ಯೋಜನೆ ಮತ್ತು ಪ್ರಧಾನಮಂತ್ರಿ ಸುರಕ್ಷಾ ವಿಮಾ ಯೋಜನೆಯ ಬಗ್ಗೆ ಮಾಹಿತಿ ನೀಡಿದರು. ಸಭಾಧ್ಯಕ್ಷತೆ ವಹಿಸಿದ್ದ ಆಲಂಕಾರು ಗ್ರಾ.ಪಂ ಅಧ್ಯಕ್ಷರಾದ ಸುಶೀಲ ರವರು ಗ್ರಾಮಸಭೆಯ ಮಹತ್ವ ತಿಳಿಸಿ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು.ಗ್ರಾ.ಪಂ ಕಾರ್ಯದರ್ಶಿ ಸ್ವಾಗತಿಸಿ, ಅಭಿವೃದ್ಧಿ ಅಧಿಕಾರಿ ಸುಜಾತ.ಕೆ ಧನ್ಯವಾದ ಸಮರ್ಪಿಸಿದರು.

ವೇದಿಕೆಯಲ್ಲಿ ಉಪಾಧ್ಯಕ್ಷರಾದ ರವಿ ಪೂಜಾರಿ.ಕೆ,ಗ್ರಾ.ಪಂ ಸದಸ್ಯರಾದ ಸದಾನಂದ ಆಚಾರ್ಯ, ಶ್ವೇತಕುಮಾರ್, ವಾರಿಜ, ಸುಮತಿ, ಸುನಂದ ಬಾರ್ಕುಳಿ, ರೂಪ ಶ್ರೀ, ಶಾರದ ಉಪಸ್ಥಿತರಿದ್ದರು. ಆಲಂಕಾರು ಗ್ರಾಮೀಣ ಪುನರ್ವಸತಿ ಕಾರ್ಯಕರ್ತ ಮೋನಪ್ಪ.ಬಿ, ಪೆರಾಬೆ ಗ್ರಾಮ ಪಂಚಾಯತ್ ನ ಮುತ್ತಪ್ಪ, ಕಡಬ ಪಟ್ಟಣ ಪಂಚಾಯತ್ ನ ಪ್ರತಿಭಾ ಶೆಟ್ಟಿ,ಸೇರಿದಂತೆ ವಿಶೇಷ ಚೇತನರು,ಮಹಿಳೆಯರು, ಅಂಗನವಾಡಿ,ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು. ಗ್ರಾ.ಪಂ ಸಿಬ್ಬಂದಿಗಳು ಸಹಕರಿಸಿದರು.

LEAVE A REPLY

Please enter your comment!
Please enter your name here