ಬಜತ್ತೂರು: ನೇಣು ಬಿಗಿದು ಮಹಿಳೆ ಆತ್ಮಹತ್ಯೆ

0

ಉಪ್ಪಿನಂಗಡಿ: ಆರೋಗ್ಯ ಸಮಸ್ಯೆಯಿಂದ ಬೇಸತ್ತು ಮಹಿಳೆಯೋರ್ವರು ಮನೆ ಬಳಿಯ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಜ.13ರಂದು ಬಜತ್ತೂರು ಗ್ರಾಮದ ಬೇರಿಕೆ ಎಂಬಲ್ಲಿ ನಡೆದಿದೆ.


ಇಲ್ಲಿನ ನಿವಾಸಿ ಶಾರದಾ (50) ಮೃತ ಮಹಿಳೆ. ಪದೇ ಪದೇ ಕಾಡುತ್ತಿರುವ ಅನಾರೋಗ್ಯದಿಂದಾಗಿ ಬೇಸತ್ತ ಇವರು ಬೆಳಗ್ಗೆ ಮನೆ ಸಮೀಪದ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಮೃತರ ಪತಿ ಶಾಂತಪ್ಪ ಪೂಜಾರಿ ಉಪ್ಪಿನಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಮೃತರು ಪತಿ, ಇಬ್ಬರು ಪುತ್ರಿಯರು ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here