ಜ.15: ಲಯನ್ಸ್ ಕ್ರೌನ್ ಗೆ ಜಿಲ್ಲಾ ಗವರ್ನರ್ ಅಧಿಕೃತ ಭೇಟಿ

0

ಪುತ್ತೂರು:ಲಯನ್ಸ್ ಜಿಲ್ಲಾ 317ಡಿ, ರೀಜ್ಹನ್ 7, ವಲಯ ಒಂದರ ಲಯನ್ಸ್ ಕ್ಲಬ್ ಪುತ್ತೂರು ಕ್ರೌನ್ ಗೆ ಲಯನ್ಸ್ ಜಿಲ್ಲಾ ಗವರ್ನರ್ ಅಧಿಕೃತ ಭೇಟಿ ಕಾರ್ಯಕ್ರಮ ಜ.15 ರಂದು ಎಪಿಎಂಸಿ ರಸ್ತೆಯ ಕ್ರಿಸ್ಟೋಫರ್ ಸಭಾಂಗಣದಲ್ಲಿ ಜರಗಲಿದೆ.


ಲಯನ್ಸ್ ಜಿಲ್ಲಾ ಗವರ್ನರ್ ಕುಡ್ಪಿ ಅರವಿಂದ ಶೆಣೈ ಹಾಗೂ ಮಮತಾ ಶೆಣೈ ದಂಪತಿ ಕ್ರೌನ್ ಕ್ಲಬ್ ನ ಸಮಾಜಮುಖಿ ಕಾರ್ಯಗಳಿಗೆ ಚಾಲನೆ ನೀಡಲಿದ್ದಾರೆ ಎಂದು ಲಯನ್ಸ್ ಪುತ್ತೂರು ಕ್ರೌನ್ ಸ್ಥಾಪಕಾಧ್ಯಕ್ಷ ಲ್ಯಾನ್ಸಿ ಮಸ್ಕರೇನ್ಹಸ್, ಅಧ್ಯಕ್ಷ ಅಂತೋನಿ ಒಲಿವೆರಾ, ಕಾರ್ಯದರ್ಶಿ ಲೀನಾ ಮಚಾದೋ, ಕೋಶಾಧಿಕಾರಿ ವಿಕ್ಟರ್ ಶರೋನ್ ಡಿ’ಸೋಜರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here