ದ ಕ ಜಿಲ್ಲಾ ಕಾಂಗ್ರೆಸ್ ವಕ್ತಾರರಾಗಿ ಮಹಮ್ಮದ್ ಬಡಗನ್ನೂರು ನೇಮಕ

0

ಪುತ್ತೂರು: ಹಿರಿಯ ಕಾಂಗ್ರೆಸ್ ಮುಖಂಡ ತಾಲೂಕು ಅಕ್ರಮ ಸಕ್ರಮ ಸಮಿತಿ ಸದಸ್ಯರಾದ ಮಹಮ್ಮದ್ ಬಡಗನ್ನೂರು ಅವರನ್ನು ದ ಕ ಜಿಲ್ಲಾ ಕಾಂಗ್ರೆಸ್ ವಕ್ತಾರರನ್ನಾಗಿ ನೇಮಕ ಮಾಡಿ ಕೆಪಿಸಿಸಿ ಆದೇಶ ಹೊರಡಿಸಿದೆ.ಕೆಪಿಸಿಸಿ ರಾಜ್ಯ ಮಾಧ್ಯಮ ಮತ್ತು ಸಂಹವನ ವಿಭಾಗದ ಅಧ್ಯಕ್ಷರಾದ ರಮೇಶ್ ಬಾಬುರವರು ನೇಮಕ ಮಾಡಿ ಆದೇಶಿಸಿದ್ದಾರೆ.


ಮಹಮ್ಮದ್ ಬಡಗನ್ನೂರುರವರು ಪುತ್ತೂರಿನ ಹಿರಿಯ ಕಾಂಗ್ರೆಸ್ ನಾಯಕರಾಗಿದ್ದು ಬಡಗನ್ನೂರು ಗ್ರಾಪಂ ಅಧ್ಯಕ್ಷರಾಗಿ, ಪುತ್ತೂರು ತಾಲೂಕು ಪಂಚಾಯತ್ ಅಧ್ಯಕ್ಷರಾಗಿ, ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ, ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾಗಿ, ಪಡುಮಲೆ ಕೋಟಿ ಚೆನ್ನಯ್ಯ ಅಭಿವೃದ್ದಿ ಸಮಿತಿ ಸದಸ್ಯರಾಗಿ, ಪಡುಮಲೆ ಜುಮಾ ಮಸೀದಿ ಅಧ್ಯಕ್ಷರಾಗಿ ,ಕಾಂಗ್ರೆಸ್ ಪಕ್ಷದ ರಾಜ್ಯ ತರಬೇತುದಾರರಾಗಿ ಹಾಗೂ ರಾಜ್ಯ ಮಟ್ಟದ ಸಂಪನ್ಮೂಲ ವ್ಯಕ್ತಿಯಗಿ ಪಕ್ಷಕ್ಕೆ ಸೇವೆ ಸಲ್ಲಿಸಿದ್ದರು. ಪ್ರಸ್ತುತ ಜಿಲ್ಲಾ ವಕ್ತಾರರನ್ನಾಗಿ ಪಕ್ಷವು ಅವರನ್ನು ನೇಮಕ ಮಾಡಿದೆ. ಪುತ್ತೂರು ಶಾಸಕ ಅಶೋಕ್ ರೈ ಅವರ ಶಿಫಾರಸ್ಸಿನಂತೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಹರೀಶ್‌ಕುಮಾರ್ ಅವರ ಸೂಚನೆಯಂತೆ ಕೆಪಿಸಿಸಿ ಈ ನೇಮಕಾತಿ ಮಾಡಿರುತ್ತದೆ.

LEAVE A REPLY

Please enter your comment!
Please enter your name here