







ಮಂಗಳೂರು: ಮಂಗಳೂರು ಪ್ರೆಸ್‌ಕ್ಲಬ್ ದಿನಾಚರಣೆ ಅಂಗವಾಗಿ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರ ಮಕ್ಕಳಿಗೆ ಮಂಗಳೂರು ಪ್ರೆಸ್‌ಕ್ಲಬ್ ವತಿಯಿಂದ ‘ಪ್ರತಿಭಾ ಪುರಸ್ಕಾರ’ ನೀಡಲು ಅರ್ಜಿ ಆಹ್ವಾನಿಸಲಾಗಿದೆ.


2024–25ನೇ ಸಾಲಿನ ಎಸ್.ಎಸ್.ಎಲ್.ಸಿ. ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಶೇ.85 ಮತ್ತು ಅದಕ್ಕಿಂತ ಹೆಚ್ಚಿನ ಅಂಕ ಪಡೆದ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರ ಮಕ್ಕಳನ್ನು ಈ ಪುರಸ್ಕಾರಕ್ಕೆ ಪರಿಗಣಿಸಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ.



ಅರ್ಜಿಯೊಂದಿಗೆ ಲಗತ್ತಿಸಬೇಕಾದ ದಾಖಲೆಗಳು:
>ಅರ್ಹ ವಿದ್ಯಾರ್ಥಿ/ವಿದ್ಯಾರ್ಥಿನಿಯ ಭಾವಚಿತ್ರ
>ಅಂಕಪಟ್ಟಿಯ ಪ್ರತಿ
>ಬ್ಯಾಂಕ್ ಪಾಸ್‌ಬುಕ್ ವಿವರಗಳು
ಅರ್ಜಿಗಳನ್ನು ಪ್ರಧಾನ ಕಾರ್ಯದರ್ಶಿ, ಮಂಗಳೂರು ಪ್ರೆಸ್‌ಕ್ಲಬ್, ಪತ್ರಿಕಾ ಭವನ, ಲೇಡಿಹಿಲ್–ಉರ್ವ ಮಾರ್ಕೆಟ್ ರಸ್ತೆ, ಮಂಗಳೂರು–6 ಈ ವಿಳಾಸಕ್ಕೆ 2026ರ ಜನವರಿ 24ರೊಳಗಾಗಿ ಕಳುಹಿಸಬೇಕು.
ಸಂಘದ ಸದಸ್ಯರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ದ.ಕ. ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ರಾಜೇಶ್ ಪೂಜಾರಿ ವಿನಂತಿಸಿದ್ದಾರೆ.









