ಕಾರ್ಕಳ ಸರಕಾರಿ ಕಿ.ಪ್ರಾ. ಶಾಲೆಗೆ ಕೊಠಡಿ ನಿರ್ಮಾಣಕ್ಕೆ ಧರ್ಮಸ್ಥಳದಿಂದ ಸಹಾಯಧನ

0

ಕಡಬ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಡಬ ತಾಲೂಕು ಇದರ ವತಿಯಿಂದ ಕುಟ್ರುಪ್ಪಾಡಿ ಗ್ರಾ.ಪಂ.ವ್ಯಾಪ್ತಿಯ ಕಾರ್ಕಳ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಕೊಠಡಿ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗಡೆಯವರು ಮಂಜೂರು ಮಾಡಿದ ಸಹಾಯಧನ ಮಂಜೂರಾತಿ ಪತ್ರವನ್ನು ಹಸ್ತಾಂತರಿಸಲಾಯಿತು.


ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ದ.ಕ.ಜಿಲ್ಲೆಯ ಜಿಲ್ಲಾ ನಿರ್ದೇಶಕ ಬಾಬು ನಾಯ್ಕ್ ಅವರು, ಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷ ಪ್ರಸನ್ನ ಹೆಬ್ಬಾರು ಹಾಗೂ ಮುಖ್ಯ ಶಿಕ್ಷಕಿ ಸೂಸಮ್ಮ ಮುತ್ತಾಯಿಯವರಿಗೆ ಮಂಜೂರಾತಿ ಪತ್ರವನ್ನು ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಕಡಬ ತಾಲೂಕಿನ ಯೋಜನಾಧಿಕಾರಿ ಪ್ರಕಾಶ್ ಕುಮಾರ್, ಉಡುಪಿ ಪ್ರಾದೇಶಿಕ ಕಚೇರಿ ಯೋಜನಾಧಿಕಾರಿ ಜಯಂತ್ ನಾಯ್ಕ್, ಶಾಲಾ ಎಸ್.ಡಿ.ಎಂ.ಸಿ ಮಾಜಿ ಅಧ್ಯಕ್ಷ ಸುಧಾಕರ್ ಪಿ., ವಲಯ ಮೇಲ್ವಿಚಾರಕ ವಿಜೇಶ್ ಜೈನ್, ಎಸ್.ಡಿ.ಎಂ.ಸಿ ಸದಸ್ಯರಾದ ಚಿದಾನಂದ ಎ.ಎಸ್., ಶ್ರುತಿ, ಸಂತೋಷ್, ಅಂಗನವಾಡಿ ಶಿಕ್ಷಕಿ ಮೇರಿ ಎನ್.ಎ. ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here