ಕಾಣಿಯೂರು: ಬೃಹತ್ ಹಿಂದೂ ಸಂಗಮ, ಶೋಭಾಯಾತ್ರೆಯ ಆಮಂತ್ರಣ ಪತ್ರಿಕೆ ಅನಾವರಣ

0

ಕಾಣಿಯೂರು: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಶತಮಾನೋತ್ಸವ ಅಂಗವಾಗಿ ಪುತ್ತೂರು ತಾಲೂಕು ಹಿಂದೂ ಸಂಗಮ ಆಯೋಜನ ಸಮಿತಿ ವತಿಯಿಂದ ಕಾಣಿಯೂರು, ದೋಳ್ಪಾಡಿ, ಚಾರ್ವಾಕ, ಕಾೖಮಣ ಹಾಗೂ ಬೆಳಂದೂರು ಗ್ರಾಮಗಳನ್ನು ಒಳಗೊಂಡ ಕಾಣಿಯೂರು ಮಂಡಲ ನೇತೃತ್ವದಲ್ಲಿ ಫೆ.2ರಂದು ಕಾಣಿಯೂರು ಶ್ರೀ ರಾಮತೀರ್ಥ ಮಠ ಜಾತ್ರಾ ಮೈದಾನದಲ್ಲಿ ಸಂಜೆ ನಡೆಯಲಿರುವ ಬೃಹತ್ ಹಿಂದು ಸಂಗಮ ಮತ್ತು ಶೋಭಾ ಯಾತ್ರೆ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಕಾಣಿಯೂರು ಶ್ರೀ ಅಮ್ಮನವರ ದೇವಸ್ಥಾನದಲ್ಲಿ ಜ.19ರಂದು ನಡೆಯಿತು. ಕಾಣಿಯೂರು ಶ್ರೀ ರಾಮತೀರ್ಥ ಮಠದ ಮ್ಯಾನೇಜರ್ ಶ್ರೀನಿಧಿ ಆಚಾರ್ ಅವರು ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಕಾಣಿಯೂರು, ದೋಳ್ಪಾಡಿ, ಚಾರ್ವಾಕ, ಕಾೖಮಣ ಹಾಗೂ ಬೆಳಂದೂರು ಗ್ರಾಮಗಳ ಪ್ರಮುಖರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here