ಗುಮ್ಮಟೆಗದ್ದೆ : ಕಾಳು ಮೆಣಸು ಕೊಯ್ಯುತ್ತಿರುವ ವೇಳೆ ಅವಘಡ : ತೆಂಗಿನಮರದಿಂದ ಬಿದ್ದು ನಿವೃತ್ತ ಶಿಕ್ಷಕ ಸಾವು

0

ಪುತ್ತೂರು: ಕಾಳು ಮೆಣಸು ಕೊಯ್ಯುತ್ತಿರುವ ವೇಳೆ ತೆಂಗಿನ ಮರದಿಂದ ಬಿದ್ದು ನಿವೃತ್ತ ಮುಖ್ಯ ಶಿಕ್ಷಕರೋರ್ವರು ಮೃತಪಟ್ಟಿರುವ ಘಟನೆ ಜ.19ರಂದು ಬೆಟ್ಟಂಪಾಡಿ ಗ್ರಾಮದ ಗುಮ್ಮಟೆಗದ್ದೆಯಲ್ಲಿ ನಡೆದಿದೆ.


ಬೆಟ್ಟಂಪಾಡಿ ಗ್ರಾಮದ ಗುಮ್ಮಟೆಗದ್ದೆ ನಿವಾಸಿ ನಾರಾಯಣ ನಾಯ್ಕ ಪೈಂತಿಮುಗೇರು ಮೃತರು.

ಬೆಳಿಗ್ಗೆ ತನ್ನ ಮನೆ ಮುಂಭಾಂಗದಲ್ಲಿದ್ದ ತೆಂಗಿನ ಮರದಲ್ಲಿ ಬೆಳೆದಿದ್ದ ಕಾಳು ಮೆಣಸನ್ನು ಅಲ್ಯೂಮಿನಿಯಂ ಏಣಿ ಏರಿ ಕೊಯ್ಯುತ್ತಿರುವ ವೇಳೆ ಏಣಿ ಸಹಿತ ಅವರು ಮರದಿಂದ ಜಾರಿ ಬಿದ್ದಿದ್ದಾರೆ. ಘಟನೆಯಿಂದ ನಾರಾಯಣ ನಾಯ್ಕರವರಿಗೆ ಗಂಭೀರ ಗಾಯಗಳಾಗಿದ್ದು ಅವರನ್ನು ಕೂಡಲೇ ಪುತ್ತೂರು ಆಸ್ಪತ್ರೆಗೆ ಕರೆತರಲಾಗಿತ್ತು. ಈ ವೇಳೆ ಅವರು ದಾರಿ ಮಧ್ಯೆ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಆಸ್ಪತ್ರೆಯಲ್ಲಿ ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದನ್ನು ಖಚಿತಪಡಿಸಿದ್ದಾರೆ.


ಮೃತರು ಪತ್ನಿ ಯಶೋಧ, ಪುತ್ರರಾದ ತಿಲಕ್‌ರಾಜ್ ಹಾಗೂ ಯತಿನ್ ರಾಜ್‌ ರನ್ನು ಅಗಲಿದ್ದಾರೆ.

ಶಾಸಕ ಅಶೋಕ್ ಕುಮಾರ್ ರೈ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣ ಪ್ರಸಾದ್ ಆಳ್ವ ಸಹಿತ ಹಲವು ಮಂದಿ ಸರಕಾರಿ ಆಸ್ಪತ್ರೆಗೆ ಭೇಟಿ ನೀಡಿ ಅಂತಿಮ ದರ್ಶನ ಪಡೆದರು.

LEAVE A REPLY

Please enter your comment!
Please enter your name here