ಜ.22 ಮಾಣಿ ಕೊಡಾಜೆಯಲ್ಲಿ ಲೋಕಾರ್ಪಣೆಗೊಳ್ಳುತ್ತಿದೆ ನಕ್ಷತ್ರ ಸಭಾಂಗಣ

0

ಪುತ್ತೂರು: ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಗ್ರಾಮೀಣ ಭಾಗವಾದ ಮಾಣಿ ಕೊಡಾಜೆಯಲ್ಲಿ ಎಲ್ಲಾ ಸೌಕರ್ಯವನ್ನೊಳಗೊಂಡ ಸರ್ವಸಜ್ಜಿತ ನವೀನ ಮಾದರಿಯ ನಕ್ಷತ್ರ ಸಭಾಂಗಣ ಜ.22 ರಂದು ಬೆಳಿಗ್ಗೆ 11 ಗಂಟೆಗೆ ಲೋಕಾರ್ಪಣೆಗೊಳ್ಳಲಿದೆ ಎಂದು ದಿಲೀಪ್ ಶೆಟ್ಟಿ ಕೊಡಾಜೆ, ಸುಲೋಚನ ಡಿ.ಶೆಟ್ಟಿ, ಮಾ. ಧನ್ವಿತ್ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಭಾ ಕಾರ್ಯಕ್ರಮ
ಕರ್ನಾಟಕ ಸರಕಾರದ ಮಾಜಿ ಸಚಿವರಾದ ಬಿ. ರಮಾನಾಥ ರೈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಮಾಣಿ ಶ್ರೀ ಉಳ್ಳಾಲ್ತಿ ದೈವಸ್ಥಾನ ಆಡಳಿತ ಮೊಕ್ತೇಸರರಾದ ಸಚಿನ್ ರೈ ಮಾಣಿಗುತ್ತುಸಭಾಂಗಣವನ್ನು ಉದ್ಘಾಟಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಪುತ್ತೂರಿನ ಶಾಸಕರಾದ ಅಶೋಕ್ ಕುಮಾರ್ ರೈ , ಮಾಜಿ ಶಾಸಕರುಗಳಾದ ಎ. ರುಕ್ಮಯ ಪೂಜಾರಿ, ಶಕುಂತಳಾ ಟಿ. ಶೆಟ್ಟಿ, ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ತುಂಬೆ ಇದರ ಅಧ್ಯಕ್ಷರಾದ ಚಂದ್ರಪ್ರಕಾಶ್ ಶೆಟ್ಟಿ ತುಂಬೆಗುತ್ತು, ಉದ್ಯಮಿ ಹಾಗೂ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕ ತ ಪ್ರವೀಣ್ ಶೆಟ್ಟಿ ಪುತ್ತೂರು ಉಡುಪಿ (ಪುಣೆ), ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪಕ್ಕಳ, ದ. ಕ. ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಎಂ. ಎಸ್. ಮಹಮ್ಮದ್, ದ. ಕ. ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಪದ್ಮಶೇಖರ್ ಜೈನ್, ಗುಡ್ಡ ಶೆಟ್ಟಿ ಯಾನೆ ರತ್ನಾಕರ ಭಂಡಾರಿ ಅರೆಬೆಟ್ಟುಗುತ್ತು, ಶ್ರೀ ಗುಡ್ಡೆಚಾಮುಂಡಿ ದೈವಸ್ಥಾನ ಪೆರಾಜೆ ಇದರ ಅನುವಂಶೀಯ ಆಡಳಿತ ಮೊಕ್ತೇಸರರಾದ ಶ್ರೀಕಾಂತ್ ಆಳ್ವ ಪೆರಾಜೆಗುತ್ತು, ಶ್ರೀ ಉಳ್ಳಾಲ್ತಿ ದೈವಸ್ಥಾನ ಅನಂತಾಡಿ ಇದರ ಆಡಳಿತ ಮೊಕ್ತೇಸರರಾದ ನರೇಂದ್ರ ರೈ ನೆಲ್ತೊಟ್ಟು, ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಹರೀಶ್ ಇಂಜಾಡಿ, ಬಂಟರ ಸಂಘ ಬಂಟವಾಳ ತಾಲೂಕು ಇದರ ಅಧ್ಯಕ್ಷರಾದ ಜಗನ್ನಾಥ ಚೌಟ ಬದಿಗುಡ್ಡೆ, ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘ ಇದರ ಅಧ್ಯಕ್ಷರಾದ ಭುವನೇಶ್ ಪಚ್ಚಿನಡ್ಕ, ಬಂಟ್ವಾಳ ಯೋಜನಾ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಬೇಬಿ ಕುಂದರ್, ಮೂಡೂರು-ಪಡೂರು ಜೋಡುಕರೆ ಕಂಬಳ ಸಮಿತಿ ಬಂಟ್ವಾಳ ಇದರ ಅಧ್ಯಕ್ಷರಾದ ಪಿಯೂಸ್ ಎಲ್. ರೋಡ್ರಿಗಸ್, ಕೊಡಾಜೆ ಎಜ್ಯುಕೇಶನಲ್ ಟ್ರಸ್ಟ್ ಇದರ ಅಧ್ಯಕ್ಷರಾದ ಮಹಮ್ಮದ್ ರಫೀಕ್ ಹಾಜಿ ಸುಲ್ತಾನ್, ನಗರ ಯೋಜನಾ ಪ್ರಾಧಿಕಾರ ಪುತ್ತೂರು ಇದರ ಸದಸ್ಯ ಅನ್ವರ್ ಖಾಸಿಂ, ಜಿಲ್ಲಾರ್ಮಿಕ ಪರಿಷತ್ ಸದಸ್ಯರಾದ ದೇವಪ್ಪ ಕುಲಾಲ್ ಪಂಜಿಕಲ್ಲು ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ.

ಉದ್ಘಾಟನೆಯ ಪ್ರಯಕ್ತ ಮಧ್ಯಾಹ್ನ ಗಂಟೆ 1 ರಿಂದ ಜಿಲ್ಲೆಯ ಪ್ರಸಿದ್ಧ ಕಲಾವಿದರಿಂದ ಯಕ್ಷಗಾನ ವೈಭವ ನಡೆಯಲಿದೆ. ಪುಣೆಯಲ್ಲಿ ಉದ್ಯಮಿಯಾಗಿರುವ ದಿಲೀಪ್ ಶೆಟ್ಟಿ ಕೊಡಾಜೆ ಇವರ ಕನಸಿನ ಕೂಸು ನಕ್ಷತ್ರ ಸಭಾಂಗಣ ಉತ್ತಮ ಆಸನ ವ್ಯವಸ್ಥೆ, ವಿಶಾಲವಾದ ಪಾರ್ಕಿಂಗ್ ಸ್ಥಳ, ವ್ಯವಸ್ಥಿತವಾದ ಅಡಿಗೆ ಕೊಠಡಿಯನ್ನು ಹೊಂದಿದೆ. ಬುಕ್ಕಿಂಗ್ ಗೆ 8888214910 ಸಂಪರ್ಕಿಸ ಬಹುದಾಗಿದೆ.

ಸಮಾರಂಭಗಳಿಗೆ ಅನುಕೂಲಕರವಾದ ನಕ್ಷತ್ರ ಎಸಿ/ನಾನ್ ಎಸಿ ಸಭಾಂಗಣ ಉದ್ಘಾಟನೆಗೊಳ್ಳುತ್ತಿದೆ. ಇದರಿಂದ ತಾಲೂಕಿನ ಹಾಗೂ ಆಸುಪಾಸಿನವರಿಗೆ ಬಹಳ ಅನುಕೂಲಕರವಾಗಲಿದೆ. ಗ್ರಾಹಕರು ಇದರ ಸದುಪಯೋಗವನ್ನು ಪಡೆದು ಯಶಸ್ವಿಯಾಗಿ ಮುನ್ನಡೆಯಲು ಸಹಕರಿಸಿ.
ದಿಲೀಪ್ ಶೆಟ್ಟಿ ಕೊಡಾಜೆ

LEAVE A REPLY

Please enter your comment!
Please enter your name here