







ಅಧ್ಯಕ್ಷ ಕಿಶೋರ್ ಕುಮಾರ್, ಕಾರ್ಯದರ್ಶಿ ಗಣೇಶ್ ಸುವರ್ಣ, ಖಜಾಂಚಿ ವಿನೋದ್ ಶೆಟ್ಟಿ


ಪುತ್ತೂರು: ಮುಂಡೂರು ಗ್ರಾಮದ ಉದಯಗಿರಿ ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿಯ ನೂತನ ಅಧ್ಯಕ್ಷರಾಗಿ ಕಿಶೋರ್ ಕುಮಾರ್ ಉದಯಗಿರಿ, ಕಾರ್ಯದರ್ಶಿಯಾಗಿ ಗಣೇಶ್ ಸುವರ್ಣ ಬೊಳ್ಳಗುಡ್ಡೆ ಹಾಗೂ ಕೋಶಾಧಿಕಾರಿಯಾಗಿ ವಿನೋದ್ ಶೆಟ್ಟಿ ಪಂಜಳ ಆಯ್ಕೆಯಾಗಿದ್ದಾರೆ.



ಇತ್ತೀಚೆಗೆ ನಡೆದ ಭಜನಾ ಮಂಡಳಿಯ ವಾರ್ಷಿಕ ಮಹಾಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಗೌರವಾಧ್ಯಕ್ಷರಾಗಿ ರವೀಂದ್ರನಾಥ್ ರೈ ಬಳ್ಳಮಜಲು, ಗೌರವ ಸಲಹೆಗಾರರಾಗಿ ವಸಂತ ರೈ ಶಿಬರ, ಜಯಂತ ನಡುಬೈಲು, ಉಪಾಧ್ಯಕ್ಷರಾಗಿ ಬಾಲಕೃಷ್ಣ ಪೆರ್ಯಡ್ಕ, ಜತೆ ಕಾರ್ಯದರ್ಶಿಯಾಗಿ ಜಯರಾಮ. ಬಿ.ಎನ್. ಹಾಗೂ ಮಂಡಳಿಗೆ 36 ಸದಸ್ಯರನ್ನು ಆಯ್ಕೆ ಮಾಡಲಾಯಿತು.










