ವಿವೇಕಾನಂದ ವಿದ್ಯಾವರ್ಧಕ ಸಂಘದ ಸಿಇಒ ಲಕ್ಷ್ಮೀಪ್ರಸಾದ್‌ರಿಗೆ ಪೊಲೀಸ್ ನೊಟೀಸ್

0

ಪುತ್ತೂರು: ಕೋಮು ಪ್ರಚೋದನಕಾರಿ ಭಾಷಣ ಮಾಡಿರುವ ಆರೋಪದಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರೂ ಆಗಿರುವ ಆರ್‌ಎಸ್‌ಎಸ್ ಮುಖಂಡ ಡಾ.ಕಲ್ಲಡ್ಕ ಪ್ರಭಾಕರ ಭಟ್,ವಿಕಸನ ಯುಟ್ಯೂಬ್ ಚಾನೆಲ್ ಮತ್ತು ಕಾರ್ಯಕ್ರಮದ ಆಯೋಜಕರ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಜ.21ರಂದು ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿ ಕೆಲ ಸಂಗತಿಗಳನ್ನು ಖಚಿತಪಡಿಸಿಕೊಳ್ಳುವ ನಿಟ್ಟಿನಲ್ಲಿ ಜ.27ರಂದು ಬೆಳಿಗ್ಗೆ ಪುತ್ತೂರು ನಗರ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾಗುವಂತೆ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಾಹಕ ಅಧಿಕಾರಿ ಲಕ್ಷ್ಮೀಪ್ರಸಾದ್ ಬೊಟ್ಯಾಡಿ ಅವರಿಗೆ ಪೊಲೀಸರು ನೊಟೀಸ್ ಜಾರಿ ಮಾಡಿದ್ದಾರೆ.


ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಕಲಂ 35(3) ಅಡಿಯಲ್ಲಿ ಪ್ರದತ್ತವಾದ ಅಧಿಕಾರವನ್ನು ಬಳಸಿಕೊಂಡು,ತನಿಖಾಧಿಕಾರಿಯಾಗಿರುವ ಪುತ್ತೂರು ನಗರ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕರಾದ ಶ್ರೀಮತಿ ಸೇಸಮ್ಮ ಕೆ.ಎಸ್.ಅವರು ನೊಟೀಸ್ ಜಾರಿ ಮಾಡಿ, ಜ.27ರಂದು ಬೆಳಿಗ್ಗೆ 10 ಗಂಟೆಗೆ ಪುತ್ತೂರು ನಗರ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾಗಬೇಕು ಎಂದು ಲಕ್ಷ್ಮೀಪ್ರಸಾದ್ ಅವರಿಗೆ ಸೂಚನೆ ನೀಡಿದ್ದಾರೆ.ಪ್ರಕರಣದ ತನಿಖೆಯಲ್ಲಿ ಕಂಡುಕೊಂಡಂತೆ,ಸದ್ರಿ ಪ್ರಕರಣದ ಕುರಿತಂತೆ ಸಂಗತಿಗಳನ್ನು ಮತ್ತು ಸಂದರ್ಭಗಳನ್ನು ತಮ್ಮಿಂದ ಖಚಿತ ಪಡಿಸಿಕೊಳ್ಳುವ ಬಗ್ಗೆ ನಿಮ್ಮನ್ನು ವಿಚಾರಿಸುವುದು ಅಗತ್ಯವಾಗಿದೆ ಎಂದು ಕಂಡು ಬಂದಿರುವುದರಿಂದ ವಿಚಾರಣೆಗೆ ಹಾಜರಾಗುವಂತೆ ಎಸ್‌ಐಯವರು ನೊಟೀಸ್‌ನಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here