







ಪುತ್ತೂರು: ಬೊಳುವಾರು ಶ್ರೀ ದುರ್ಗಾಪರಮೇಶ್ವರಿ ಉಳ್ಳಾಳ್ತಿ ಮಲರಾಯ ಸಪರಿವಾರ ಕ್ಷೇತ್ರದಲ್ಲಿ 10ನೇ ವರ್ಷದ ಪ್ರತಿಷ್ಠಾ ವಾರ್ಷಿಕೋತ್ಸವ, ಚಂಡಿಕಾಯಾಗ ಮತ್ತು ದೈವಗಳ ನೇಮೋತ್ಸವವು ಜ.24, 25ರಂದು ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಯವರ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿರುವುದು.


ಜ.24ರಂದು ಬೆಳಿಗ್ಗೆ 8ರಿಂದ ದೇವತಾ ಪ್ರಾರ್ಥನೆ, ಆಚಾರ್ಯ ವರಣ, ಮಹಾಗಣಪತಿ ಹೋಮ, ಚಂಡಿಕಾಯಾಗ ಪ್ರಾರಂಭ, ಪಂಚವಿಂಶತಿ ಕಲಶಪೂಜೆ, ಕಲಶಾಭಿಷೇಕ, ನಾಗದೇವರಿಗೆ ಪಂಚಾಮೃತಾಭಿಷೇಕ, ತಂಬಿಲ ಸೇವೆ, ಮಲರಾಯ ಮತ್ತು ಪರಿವಾರ ದೈವಗಳಿಗೆ ತಂಬಿಲ ಸೇವೆ, ಮಧ್ಯಾಹ್ನ ಚಂಡಿಕಾ ಯಾಗದ ಪೂರ್ಣಾಹುತಿ, ಸುವಾಸಿನಿ ಪೂಜೆ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ಜರಗಲಿದೆ.



ಬೆಳಿಗ್ಗೆ 8.30 ಗೀತಾ ಜ್ಞಾನ ಯಜ್ಞದ ಬಳಗದವರಿಂದ ಗೀತಾ ಪಾರಾಯಣ, ಕ್ಷೇತ್ರದ ಮಾತೃ ವೃಂದದವರಿಂದ ಶ್ರೀ ಲಲಿತಾಸಹಸ್ರನಾಮ ಪಠಣ, ಸಂಜೆ ಗಂಟೆ 5.30ರಿಂದ ಶ್ರೀ ದುರ್ಗಾಪರಮೇಶ್ವರೀ (ಉಳ್ಳಾಳ್ತಿ) ಭಜನಾ ಮಂಡಳಿಯವರಿಂದ ಭಜನಾ ಕಾರ್ಯಕ್ರಮ, ಸಂಜೆ 6ರಿಂದ ಮಲರಾಯ ಮತ್ತು ಸಪರಿವಾರ ದೈವಗಳ ಭಂಡಾರ ತೆಗೆಯುವುದು, ರಾತ್ರಿ 7ರಿಂದ ದೇವರಿಗೆ ಸರ್ವಾಲಂಕಾರ ಸಹಿತ ಕಲ್ಪೋಕ್ತ ದುರ್ಗಾಪೂಜೆ, ರಂಗಪೂಜೆ, ರಾತ್ರಿ 8 ಗಂಟೆಗೆ ಮಹಾಮಂಗಳಾರತಿ, ಪ್ರಸಾದ ವಿತರಣೆ, 8.30ಕ್ಕೆ ಅನ್ನಸಂತರ್ಪಣೆ, ಗಂಟೆ 9ಕ್ಕೆ ರಕ್ತೇಶ್ವರಿ, ಕಲ್ಕುಡ, ಕಲ್ಲುರ್ಟಿ, ಪಂಜುರ್ಲಿ ದೈವಗಳ ನೇಮ ನಡೆಯಲಿರುವುದು.
ಜ.25ರಂದು 10ರಿಂದ ಮಲರಾಯ ದೈವದ ನೇಮೋತ್ಸವ, ಸಿರಿಮುಡಿ ಗಂಧ ಪ್ರಸಾದ ವಿತರಣೆಯಾಗಿ ಮಧ್ಯಾಹ್ನ ಅನ್ನಸಂತರ್ಪಣೆ, 3.30ಕ್ಕೆ ಗುಳಿಗ ದೈವದ ನೇಮೋತ್ಸವ ನಡೆಯಲಿದ್ದು, ಈ ಕಾರ್ಯಕ್ರಮಗಳಲ್ಲಿ ಭಕ್ತಾದಿಗಳು ಭಾಗವಹಿಸಿ ಸರ್ವವಿಧದ ಸಹಕಾರಗಳನ್ನಿತ್ತು ಶ್ರೀ ದೇವರ ಕೃಪೆಗೆ ಪಾತ್ರರಾಗಬೇಕೆಂದು ಕ್ಷೇತ್ರದ ಪ್ರಕಟಣೆ ತಿಳಿಸಿದೆ.










