ಜ.25: ವಿವೇಕಾನಂದ ಪಾಲಿಟೆಕ್ನಿಕ್‌ ಕಾಲೇಜಿನಲ್ಲಿ ವಿಹಂಗಮ ಸ್ಮೃತಿ ಸಂಗಮ-ಹಿರಿಯ ವಿದ್ಯಾರ್ಥಿಗಳ ಕ್ರೀಡಾಕೂಟ

0

ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘದ ಪುತ್ತೂರು ಇದರ ಅಧೀನ ಸಂಸ್ಥೆಯಾದ ವಿವೇಕಾನಂದ ಪಾಲಿಟೆಕ್ನಿಕ್‌ ಕಾಲೇಜಿನಲ್ಲಿ ವಿಹಂಗಮ ಸ್ಮೃತಿ ಸಂಗಮ-2026 ಹಿರಿಯ ವಿದ್ಯಾರ್ಥಿಗಳ ಕ್ರೀಡಾಕೂಟ ಜ.25ರಂದು ಪಾಲಿಟೆಕ್ನಿಕ್‌ ಕಾಲೇಜು ಆವರಣದಲ್ಲಿ ನಡೆಯಲ್ಲಿದೆ.

ಸಂಸ್ಥೆಯ ಹಿರಿಯ ವಿದ್ಯಾರ್ಥಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಮಾಜಿ ವ್ಯವಸ್ಥಾಪನಾ ಸಮಿತಿ ಸದಸ್ಯ, ಪಿಡಬ್ಲ್ಯೂಡಿ ಎಂಪನೆಲ್ಡ್‌ ಸ್ಟ್ರಕ್ಚರಲ್‌ ಇಂಜಿನಿಯರ್‌ ಪ್ರಸನ್ನ ದರ್ಬೆ ಕ್ರೀಡಾಕೂಟವನ್ನು ಉದ್ಘಾಟಿಸಲಿದ್ದು, ಪಾಲಿಟೆಕ್ನಿಕ್‌ ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ವಿಶ್ವೇಶ್ವರ ಭಟ್‌ ಬಂಗಾರಡ್ಕ ಅಧ್ಯಕ್ಷತೆ ವಹಿಸಲಿದ್ದಾರೆ. ಕಾಲೇಜಿನ ಸಂಚಾಲಕ ಮಹಾದೇವ ಶಾಸ್ತ್ರೀ ಮಣಿಲ ಇವರ ಉಪಸ್ಥಿತಿಯಲ್ಲಿ ನಡೆಯಲಿರುವ ಈ ಕ್ರೀಡಾಕೂಟದಲ್ಲಿ ಮುಖ್ಯ ಅತಿಥಿಯಾಗಿ ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಅರುಣ್‌ ಕುಮಾರ್‌ ರೈ ಭಾಗವಹಿಸಲಿದ್ದಾರೆ.

LEAVE A REPLY

Please enter your comment!
Please enter your name here