ವಿವೇಕಾನಂದ ಎಂಜಿನಿಯರಿಂಗ್ ಕಾಲೇಜಿನ ಅನಘ.ಕೆ.ಎನ್ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ಮಹಿಳೆಯರ ಕ್ರಿಕೆಟ್ ತಂಡಕ್ಕೆ ಆಯ್ಕೆ

0

ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ವಿದ್ಯಾರ್ಥಿನಿ ಅನಘ.ಕೆ.ಎನ್ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ಮಹಿಳೆಯರ ಕ್ರಿಕೆಟ್ ತಂಡಕ್ಕೆ ಆಯ್ಕೆಯಾಗಿದ್ದಾರೆ.

ಕಾಲೇಜಿನ ದ್ವಿತೀಯ ವರ್ಷದ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿನಿಯಾಗಿರುವ ಇವರು ಆಯ್ಕೆ ಶಿಬಿರದಲ್ಲಿ ಅತ್ಯುತ್ತಮ ಸಾಧನೆಯನ್ನು ಮಾಡಿ ವಿಶ್ವವಿದ್ಯಾನಿಲಯ ತಂಡದಲ್ಲಿ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಜನವರಿ 26 ರಿಂದ ಫೆಬ್ರವರಿ 2ರ ವರೆಗೆ ತಮಿಳ್ನಾಡಿನ ಚೆನ್ನೈಯಲ್ಲಿರುವ ಅಣ್ಣಾ ಯುನಿವರ್ಸಿಟಿಯ ಆಶ್ರಯದಲ್ಲಿ ನಡೆಯುವ ದಕ್ಷಿಣ ವಲಯ ಅಂತರ್ ವಿಶ್ವವಿದ್ಯಾನಿಲಯ ಕ್ರಿಕೆಟ್ ಪಂದ್ಯಾಟದಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ತಂಡವನ್ನು ಇವರು ಪ್ರತಿನಿಧಿಸಲಿದ್ದಾರೆ. ಇವರಿಗೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಬಾಲಚಂದ್ರ ಗೌಡ ಭಾರ್ತಿಕುಮೇರು ತರಬೇತಿಯನ್ನು ನೀಡಿದ್ದಾರೆ ಎಂದು ಪ್ರಾಂಶುಪಾಲ ಡಾ.ಮಹೇಶ್‌ಪ್ರಸನ್ನ.ಕೆ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here