ಕುಂಜಾರು ಮದಗ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಅನುಜ್ಞಾ ಕಲಶ

0

ಪುತ್ತೂರು:ಪಡ್ನೂರು ಗ್ರಾಮದ ಕುಂಜಾರು ಮದಗ ದೇವಸ್ಥಾನದ ಈಶಾನ್ಯ ಭಾಗದಲ್ಲಿರುವ ಅಶ್ವತ್ಥ ಕಟ್ಟೆ ಹಾಗೂ ಹಿಂಭಾಗದಲ್ಲಿರುವ ಪಂಜುರ್ಲಿ ದೈವದ ಗುಡಿಗಳ ಜೀರ್ಣೋದ್ಧಾರಗಳಿಗೆ ಜ.25ರಂದು ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಅನುಜ್ಞಾ ಕಲಶ ನೆರವೇರಿತು.


ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪಕಳ, ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷರು, ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿರುವ ಪಂಜಿಗುಡ್ಡೆ ಈಶ್ವರ ಭಟ್, ಸದಸ್ಯ ವಿನಯ ಸುವರ್ಣ, ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹಾರಕರೆ ವೆಂಕಟ್ರಮಣ ಭಟ್, ಸದಸ್ಯರು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.


ಧಾರ್ಮಿಕ ದತ್ತಿ ಇಲಾಖೆಗೆ ಮನವಿ:
ದೇವಸ್ಥಾನದಲ್ಲಿ ನಡೆಯುತ್ತಿರುವ ಜೀರ್ಣೋದ್ಧಾರದ ಕಾರ್ಯಗಳಿಗೆ ಅನುದಾನ ಒದಗಿಸುವಂತೆ ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪಕಳರವರ ಮುಖಾಂತರ ಧಾರ್ಮಿಕ ದತ್ತಿ ಇಲಾಖೆಯ ಸಚಿವರಾಗಿರುವ ರಾಮಲಿಂಗ ರೆಡ್ಡಿಯವರಿಗೆ ಈ ಸಂದರ್ಭದಲ್ಲಿ ಮನವಿ ಸಲ್ಲಿಸಲಾಯಿತು.

LEAVE A REPLY

Please enter your comment!
Please enter your name here