







ಪುತ್ತೂರು: ಯಕ್ಷಗಾನ ಕಲಾವಿದ, ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ ಅಧ್ಯಕ್ಷ, ಸಂಘಟಕ ಎನ್.ಚನಿಯಪ್ಪ ನಾಯ್ಕ ಅವರು ಕರ್ನಾಟಕ ಜಾನಪದ ಪರಿಷತ್ ಜಾನಪದ ಲೋಕ ಬೆಂಗಳೂರು ನೀಡುವ 2026ನೇ ಸಾಲಿನ ಜಾನಪದ ಲೋಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.


ಕರ್ನಾಟಕ ಜಾನಪದ ಪರಿಷತ್ ಅಧ್ಯಕ್ಷ ಪ್ರೊ.ಹಿ.ಚಿ.ಬೋರಲಿಂಗಯ್ಯ ಮಾಹಿತಿ ನೀಡಿ, ಫೆ.8ರಂದು ರಾಮನಗರ ಜಾನಪದ ಲೋಕದಲ್ಲಿ ನಡೆಯುವ ವಿದ್ಯಾರ್ಥಿ ಜಾನಪದ ಲೋಕೋತ್ಸವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ಪ್ರಶಸ್ತಿ ಪತ್ರ, ಸ್ಮರಣಿಕೆ ಹಾಗೂ 10 ಸಾವಿರ ರೂ. ನಗದು ಒಳಗೊಂಡಿದೆ ಎಂದರು.



ಕಾಸರಗೋಡು ಜಿಲ್ಲೆಯ ನೆಟ್ಟಣಿಗೆ ಗ್ರಾಮದ ನಿಡಿಯಡ್ಕ ನಿವಾಸಿ ಎನ್.ಚನಿಯಪ್ಪ ನಾಯ್ಕ ಅವರು ನಿವೃತ್ತ ಶಿಕ್ಷಕ, ಯಕ್ಷಗಾನ ಹಾಸ್ಯ ಕಲಾವಿದರೂ ಆಗಿದ್ದಾರೆ. ಕಳೆದ ಕೆಲವು ವರ್ಷಗಳಿಂದ ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ ಅಧ್ಯಕ್ಷರಾಗಿದ್ದಾರೆ.










