







ರಾಮಕುಂಜ: ಶ್ರೀ ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ 77ನೇ ವರ್ಷದ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು.


ಸಂಸ್ಥೆಯ ಕಾರ್ಯದರ್ಶಿ ಕೆ.ಸೇಸಪ್ಪ ರೈಯವರು ರಾಷ್ಟ್ರಧ್ವಜಾರೋಹಣಗೈದರು. ಸಂಸ್ಥೆಯ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಗಿರೀಶ್ ಎ.ಪಿ. ಸಂದರ್ಭೋಚಿತವಾಗಿ ಮಾತನಾಡಿದರು. ಸಂಸ್ಥೆಯ ಆಡಳಿತ ಅಧಿಕಾರಿ ಆನಂದ ಎಸ್.ಟಿ., ಸಹಶಿಕ್ಷಕಿ ನಿವೇದಿತಾ, ವಿದ್ಯಾರ್ಥಿಗಳಾದ ಭುವನ್ ಅನಿರುದ್ಧ್, ಜಯವರ್ಧನ ಅವರು ಗಣರಾಜ್ಯೋತ್ಸವದ ಮಹತ್ವದ ಕುರಿತು ಮಾತನಾಡಿದರು.



ಸಂಸ್ಥೆಯ ಶಿಕ್ಷಕರು ರಾಷ್ಟ್ರಭಕ್ತಿ ಬಿಂಬಿಸುವ ಹಾಡು ಹಾಡಿದರು. ಪ್ರೌಢಶಾಲಾ ಮುಖ್ಯೋಪಾಧ್ಯಾಯನಿ ಗಾಯತ್ರಿ ಯು.ಎನ್ ಸ್ವಾಗತಿಸಿ, ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯನಿ ಲೋಹಿತಾ ಎ.ವಂದಿಸಿದರು. ಸಹ ಶಿಕ್ಷಕಿಯರಾದ ಸಂಚಿತಾ, ದಿವ್ಯಾ ಜಿ., ವಿದ್ಯಾ ಕಾರ್ಯಕ್ರಮ ನಿರ್ವಹಿಸಿದರು. ಅಧ್ಯಾಪಕ ವೃಂದದವರು ಸಹಕರಿಸಿದರು. ವಿದ್ಯಾರ್ಥಿಗಳಿಗೆ ಸಿಹಿ ತಿಂಡಿ ಹಂಚಲಾಯಿತು.










