ನೆಲ್ಯಾಡಿ; 2038ನೇ ಮದ್ಯವರ್ಜನ ಶಿಬಿರದ ಸಮಾರೋಪ

0

ನೆಲ್ಯಾಡಿ: ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ನೆಲ್ಯಾಡಿ-ಕೌಕ್ರಾಡಿ ಇದರ ಆಶ್ರಯದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಕಡಬ ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಬೆಳ್ತಂಗಡಿ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಕಡಬ ತಾಲೂಕು ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ನೆಲ್ಯಾಡಿ-ಕೌಕ್ರಾಡಿ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಸಭಾಂಗಣದಲ್ಲಿ ಜ.20ರಿಂದ 27ರ ತನಕ ನಡೆದ 2038ನೇ ಮದ್ಯವರ್ಜನ ಶಿಬಿರದ ಸಮಾರೋಪ ಸಮಾರಂಭ ಜ.27ರಂದು ಮಧ್ಯಾಹ್ನ ನಡೆಯಿತು.

ಅತಿಥಿಯಾಗಿದ್ದ ಕಡಬ ತಾಲೂಕು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್‌ನ ಅಧ್ಯಕ್ಷ ಮಹೇಶ್ ಕೆ.ಸವಣೂರು ಮಾತನಾಡಿ, ಎಲ್ಲರ ಶ್ರಮದಿಂದ 2038ನೇ ಮದ್ಯವರ್ಜನ ಶಿಬಿರ ಅರ್ಥಪೂರ್ಣವಾಗಿ ನಡೆದು ಸಂಪನ್ನಗೊಂಡಿದೆ. ಶಿಬಿರಕ್ಕೆ ಖಾವಂದರ ಪಾದಸ್ಪರ್ಶದಿಂದ ನಮ್ಮೆಲ್ಲರ ಜೀವನವೂ ಪಾವನವಾಗಿದೆ. ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ನಡೆದ ಶಿಬಿರದಲ್ಲಿದ್ದ 48 ಮಂದಿಯೂ ನವಜೀವನ ಆರಂಭಿಸಿ ಸಮಾಜದಲ್ಲೂ ಗುರುತಿಸ್ಪಡುತ್ತಾರೆ ಎಂಬ ವಿಶ್ವಾಸವಿದೆ ಎಂದರು.


ಇನ್ನೋರ್ವ ಅತಿಥಿ ನೆಲ್ಯಾಡಿ ಎಲೈಟ್ ರಬ್ಬರ್ ಇಂಡಸ್ಟ್ರೀಸ್ ಮಾಲಕ ಶಾಜಿ ವರ್ಗೀಸ್ ಮಾತನಾಡಿ, ನಮ್ಮ ಬುದ್ಧಿಯನ್ನು ನಾವು ಸ್ಥಿಮಿತದಲ್ಲಿಟ್ಟುಕೊಳ್ಳಬೇಕು. ದುಶ್ಚಟಗಳಿಂದ ದೂರವಾದರೆ ಆತನ ಕುಟುಂಬವೇ ಪರಿವರ್ತನೆಯಾಗುತ್ತದೆ. ದುಶ್ಚಟದಿಂದ ದೂರ ಆದವರಿಗೆ ಮೊದಲು ಮನೆಯಲ್ಲಿ ಪ್ರೀತಿ ಸಿಗಬೇಕು. ಮನೆಯಿಂದಲೇ ಬದಲಾವಣೆ ಆಗಬೇಕೆಂದು ಹೇಳಿದರು. 2038ನೇ ಮದ್ಯವರ್ಜನ ಶಿಬಿರದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಬಾಲಕೃಷ್ಣ ಬಾಣಜಾಲು ಅಧ್ಯಕ್ಷತೆ ವಹಿಸಿದ್ದರು.


2038ನೇ ಮದ್ಯವರ್ಜನ ಶಿಬಿರದ ವ್ಯವಸ್ಥಾಪನಾ ಸಮಿತಿ ಗೌರವಾಧ್ಯಕ್ಷ ಶ್ರೀಧರ ಗೋರೆ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ನೆಲ್ಯಾಡಿ ವಲಯಾಧ್ಯಕ್ಷ ಜಯಾನಂದ ಬಂಟ್ರಿಯಾಲ್, ನೆಲ್ಯಾಡಿ ಗ್ರಾ.ಪಂ.ಅಧ್ಯಕ್ಷ ಸಲಾಂ ಬಿಲಾಲ್, ಪತ್ರಾವೋ ಆಸ್ಪತ್ರೆಯ ದಾಮೋದರ ಗೌಡ ಅವರು ಸಂದರ್ಭೋಚಿತವಾಗಿ ಮಾತನಾಡಿದರು. ನೆಲ್ಯಾಡಿ-ಕೌಕ್ರಾಡಿ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಅಧ್ಯಕ್ಷ ರವಿಚಂದ್ರ ಹೊಸವಕ್ಲು, ಶಿರಾಡಿ ಗ್ರಾ.ಪಂ. ಅಧ್ಯಕ್ಷ ಕಾರ್ತಿಕೇಯನ್, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ದ.ಕ. ಜಿಲ್ಲಾ ಸಮಿತಿ ಸದಸ್ಯ ಶಿವಪ್ರಸಾದ್ ಮೈಲೇರಿ, ಪ್ರಗತಿಬಂಧು-ಸ್ವಸಹಾಯ ಸಂಘಗಳ ಒಕ್ಕೂಟದ ನೆಲ್ಯಾಡಿ ವಲಯಾಧ್ಯಕ್ಷ ಕುಶಾಲಪ್ಪ ಗೌಡ, ನೆಲ್ಯಾಡಿ ವರ್ತಕ ಹಾಗೂ ಕೈಗಾರಿಕೆ ಸಂಘದ ಅಧ್ಯಕ್ಷ ಸತೀಶ್ ಕೆ.ಎಸ್. ದುರ್ಗಾಶ್ರೀ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಶಿಬಿರಾರ್ಥಿ ಶಿವರಾಮ್ ನಾಯ್ಕ್ ಶಿಬಿರದ ಅನುಭವ ಹಂಚಿಕೊಂಡರು. ಶಿಬಿರಾರ್ಥಿಗಳಿಗೆ ನಡೆದ ಆಟೋಟ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಕಡಬ ತಾಲೂಕು ಯೋಜನಾಧಿಕಾರಿ ಪ್ರಕಾಶ್ ಕುಮಾರ್ ಸ್ವಾಗತಿಸಿದರು. ನೆಲ್ಯಾಡಿ ವಲಯ ಮೇಲ್ವಿಚಾರಕ ಆನಂದ ಡಿ.ಬಿ. ವಂದಿಸಿದರು. ಚೇತನ ನಿರೂಪಿಸಿದರು.

ಕುಟುಂಬ ದಿನ;
ಸಮಾರೋಪ ಸಮಾರಂಭಕ್ಕೂ ಮೊದಲು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್‌ನ ಪ್ರಾದೇಶಿಕ ನಿರ್ದೇಶಕ ವಿವೇಕ್ ವಿನ್ಸೆಂಟ್ ಪಾಯಸ್ ಅವರು ಕುಟುಂಬ ದಿನ ಕಾರ್ಯಕ್ರಮ ನಡೆಸಿಕೊಟ್ಟರು. ವಿವೇಕ್ ವಿನ್ಸೆಂಟ್ ಪಾಯಸ್ ಅವರ ಹುಟ್ಟುಹಬ್ಬವನ್ನು ಕೇಕ್ ಕತ್ತರಿಸುವ ಮೂಲಕ ವೇದಿಕೆಯಲ್ಲಿ ಆಚರಿಸಲಾಯಿತು.

ಸನ್ಮಾನ:
ಕಾರ್ಯಕ್ರಮದಲ್ಲಿ ಪ್ರಾದೇಶಿಕ ನಿರ್ದೇಶಕ ವಿವೇಕ್ ವಿನ್ಸೆಂಟ್ ಪಾಯಸ್, 2038ನೇ ಮದ್ಯವರ್ಜನ ಶಿಬಿರದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಬಾಲಕೃಷ್ಣ ಬಾಣಜಾಲು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ನೆಲ್ಯಾಡಿ ವಲಯಾಧ್ಯಕ್ಷ ಜಯಾನಂದ ಬಂಟ್ರಿಯಾಲ್-ಸುಚಿತ್ರಾ ಜೆ.ಬಂಟ್ರಿಯಾಲ್ ದಂಪತಿ, ಪ್ರಗತಿಬಂಧು-ಸ್ವಸಹಾಯ ಸಂಘಗಳ ನೆಲ್ಯಾಡಿ ಒಕ್ಕೂಟದ ಅಧ್ಯಕ್ಷ ಬಾಲಕೃಷ್ಣ ಗೌಡ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ನೆಲ್ಯಾಡಿ ವಲಯಾಧ್ಯಕ್ಷ ಜಯಾನಂದ ಬಂಟ್ರಿಯಾಲ್ ಅವರು ಮದ್ಯವರ್ಜನ ಶಿಬಿರದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಬಾಲಕೃಷ್ಣ ಬಾಣಜಾಲು ಹಾಗೂ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಕಡಬ ತಾಲೂಕು ಅಧ್ಯಕ್ಷ ಮಹೇಶ್ ಕೆ. ಸವಣೂರು ಅವರನ್ನು ಸನ್ಮಾನಿಸಿ ಗೌರವಿಸಿದರು. ಶಿವಪ್ರಸಾದ್ ಮೈಲೇರಿ ಸನ್ಮಾನಿತರನ್ನು ಪರಿಚಯಿಸಿದರು.

LEAVE A REPLY

Please enter your comment!
Please enter your name here