







ಪುತ್ತೂರು ಗ್ರಾಮಾಂತರ ಪೊಲೀಸರ ಕಾರ್ಯಾಚರಣೆ
ಪುತ್ತೂರು:ಮಾದಕ ವಸ್ತುಗಳಾದ ಎಂಡಿಎಂಎ ಸೇವನೆ ಮತ್ತು ಮಾರಾಟ ಮಾಡುತ್ತಿದ್ದ ಜಾಲವೊಂದನ್ನು ಪತ್ತೆ ಮಾಡಿರುವ ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿ ಮಾರಾಟಕ್ಕೆ ಬಳಿಸಿದ ಕಾರು ಸಹಿತ ರೂ.6.5 ಲಕ್ಷ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.


ಮೊಹಮ್ಮದ್ ಹರ್ಷದ್ (33ವ.), ಪುತ್ತೂರು, ಮಹಮ್ಮದ್ ಆರೀಶ್ (31ವ.), ಪುತ್ತೂರು ಇಬ್ರಾಹಿಂ ಅಶ್ರಫ್ ಅಲಿಯಾಸ್ ರೋಜಾ ಅಶ್ರಫ್ (46ವ.) ಹಾಗೂ ಆರೋಪಿಗಳಿಗೆ ಮಾದಕ ವಸ್ತು ಎಂಡಿಎಂಎ ನೀಡುತ್ತಿದ್ದ ಬಂಟ್ವಾಳ ನಿವಾಸಿ ಮುಸ್ತಾಫ(46ವ) ಬಂಧಿತ ಆರೋಪಿಗಳು.ಆರೋಪಿಗಳಿಂದ ಅಂದಾಜು ರೂ.5೦,೦೦೦ ಮೌಲ್ಯದ ಸುಮಾರು 6.39 ಗ್ರಾಂ ಎಂಡಿಎಂಎ, ಗಾಂಜಾ ೦.82 ಗ್ರಾಂ, ಮೊಬೈಲ್ ಫೋನ್ಗಳು ಹಾಗೂ ಕೃತ್ಯಕ್ಕೆ ಬಳಸಿದ ಅಂದಾಜು ರೂ. 6ಲಕ್ಷ ಮೌಲ್ಯದ 2 ಕಾರುಗಳನ್ನು ಹಾಗೂ ಇತರೆ ಸೊತ್ತುಗಳನ್ನು ಪೊಲೀಸರು ವಶಕ್ಕೆ ಪಡೆದಿರುತ್ತಾರೆ. ವಶಪಡಿಸಿಕೊಂಡ ಒಟ್ಟು ಸೊತ್ತುಗಳ ಅಂದಾಜು ಮೌಲ್ಯ 6.5 ಲಕ್ಷವಾಗಿದೆ.



ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ಪೊಲೀಸ್ ಉಪನಿರೀಕ್ಷಕ ಗುಣಾಪಾಲ ಜೆ ರವರ ನೇತೃತ್ವದ ತನಿಖಾ ತಂಡದಲ್ಲಿ ಪುತ್ತೂರು ಗ್ರಾಮಾಂತರ ಠಾಣಾ ಉಪ ನಿರೀಕ್ಷಕರಾದ ಸುಶ್ಮಾ ಭಂಡಾರಿ ಹಾಗೂ ಸಿಬ್ಬಂಧಿಗಳಾದ ಮುರುಗೇಶ್ ಪರಮೇಶ್ವರ, ಸತೀಶ್, ಸುಬ್ರಹ್ಮಣ್ಯ, ಹರೀಶ್, ನಾಗೇಶ್, ಭವಿತ್ ರೈ ವಿನೋದ್, ನಾಗರಾಜ್, ಕಾರ್ತಿಕ್ ಹಾಗೂ ವಿಶೇಷ ತಂಡದ ಸಿಬ್ಬಂದಿಗಳಾದ ಅದ್ರಾಮ,ಪ್ರಶಾಂತ ಎಂ, ಪ್ರವೀಣ್ ರೈ, ಪ್ರಶಾಂತ್ ರೈ, ಹರ್ಷಿತ್, ಸಂಪತ್ರವರು ಹಾಗೂ ಸೋಕೋ ತಂಡದವರು ಕಾರ್ಯಾಚರಣೆಯಲ್ಲಿ ಭಾಗವಹಿಸಿರುತ್ತಾರೆ.ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕಲಂ 8(c)21(b) NDPS Act.25(1B)(B) Arms Ac ರಂತೆ ಪ್ರಕರಣ(ಅ.ಕ್ರ.13/2026)ದಾಖಲಾಗಿರುತ್ತದೆ.










