







ನೆಲ್ಯಾಡಿ: ಇಲ್ಲಿಗೆ ಸಮೀಪದ ಕೊಕ್ಕಡ ಮಾಯಿಲಕೋಟೆ ಸೀಮೆ ದೈವಸ್ಥಾನದಲ್ಲಿ ಜ.30ರಂದು ವಾರ್ಷಿಕ ನೇಮೋತ್ಸವ ನಡೆಯಲಿದೆ.


ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಕೆ.ಯು.ಪದ್ಮನಾಭ ತಂತ್ರಿಗಳು ಎಡಮನೆ ನೀಲೇಶ್ವರ ಇವರ ಮಾರ್ಗದರ್ಶನದಲ್ಲಿ ಬೆಳಿಗ್ಗೆ 8.30ರಿಂದ ಸಾಮೂಹಿಕ ಪ್ರಾರ್ಥನೆ, ಗಣಹೋಮ, ಕಲಶಪೂಜೆ, ನಾಗತಂಬಿಲ, ದೈವಗಳಿಗೆ ತಂಬಿಲ ಸೇವೆ ನಡೆಯಲಿದೆ. ಬೆಳಿಗ್ಗೆ 9 ಗಂಟೆಗೆ ಹಸಿರುವಾಣಿ ಸಮರ್ಪಣೆ, 11ರಿಂದ ಹಿರಣ್ಮಯಿ ಮಹಿಳಾ ಯಕ್ಷಗಾನ ಕಲಾಸಂಘ ನೆಲ್ಯಾಡಿ ಇವರಿಂದ ಯಕ್ಷಗಾನ ತಾಳಮದ್ದಳೆ’ ತುಳುನಾಡ ಅಮರ್ ಬೊಳ್ಳಿಲು’, ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಲಿದೆ. ಸಂಜೆ 6.30ರಿಂದ ಶ್ರೀ ಕಲ್ಲುರ್ಟಿ, ಶ್ರೀ ವರ್ಣಾರ ಪಂಜುರ್ಲಿ, ಶ್ರೀ ಕೋಟೆ ಚಾಮುಂಡಿ ಮತ್ತು ಶ್ರೀ ಗುಳಿಗ ದೈವಗಳ ನೇಮೋತ್ಸವ ನಡೆಯಲಿದೆ. ರಾತ್ರಿ ಮಹಾಅನ್ನಸಂತರ್ಪಣೆ ನಡೆಯಲಿದೆ ಎಂದು ದೈವಸ್ಥಾನದ ಪ್ರಕಟಣೆ ತಿಳಿಸಿದೆ.












